Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಮೈಸೂರಿನಲ್ಲಿ ಉಸಿರಾಡುವ ಗಾಳಿಯ ಗುಣಮಟ್ಟ ತೀವ್ರ ಕುಸಿತ: ವರದಿಯಿಂದ ಮಾಹಿತಿ ಬಹಿರಂಗ

ಮೈಸೂರು: ಬಂಡೀಪುರ, ನಾಗರಹೊಳೆ ಸೇರಿದಂತೆ ಮತ್ತಿತರ ಸಮೃದ್ಧ ಅರಣ್ಯ ಪ್ರದೇಶಗಳಿಂದ ಸುತ್ತುವರಿದಿರುವ ಮೈಸೂರು ನಗರದ ಗಾಳಿಯ ಗುಣಮಟ್ಟ ತೀವ್ರ ಕಂಡಿದೆ ಎಂದು ಸಂಶೋಧನಾ ವರದಿಯಲ್ಲಿ ಬಹಿರಂಗವಾಗಿದೆ.

ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವ ಗ್ರೀನ್‌ ಪೀಸ್‌ ಸಂಶೋಧನಾ ವರದಿಯು, ವಾಯು ಮಾಲಿನ್ಯದಿಂದ ನಗರದ ಜನತೆಯ  ಆರೋಗ್ಯದ ಮೇಲೆ ಬೀರುವ ಗಂಭೀರ ಪರಿಣಾಮಗಳ ಬಗ್ಗೆ ಸವಿವರವಾಗಿ ಹೇಳಿದೆ.

ಇನ್ನು ರಾಜ್ಯದ ಪ್ರಮುಖ ನಗರಗಳಾದ ಮೈಸೂರು, ಬೆಂಗಳೂರು ಹಾಗೂ ಮಂಗಳೂರಿನಲ್ಲಿ ನಾವು ಉಸಿರಾಡುವ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಮಾಲಿನ್ಯದ ಪ್ರಮಾಣ ಅಪಾಯಕಾರಿ ಮಟ್ಟಕ್ಕೆ ತಲುಪಿದೆ. ಆದ್ದರಿಂದ ಕೂಡಲೇ ವಾಯು ಮಾಲಿನ್ಯ ತಗ್ಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಇದು ನಮ್ಮ ಆರೋಗ್ಯದ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತದೆ ಎಂದು ಹೇಳಿದೆ.

ಗ್ರೀನ್‌ ಪೀಸ್‌ ಸಂಶೋಧನಾ ವರದಿಯು ಹತ್ತು ನಗರಗಳಲ್ಲಿ ಅಧ್ಯಯನ ಮಾಡಿ ವರದಿ ಮಾಡಿದ್ದು, ಬೆಂಗಳೂರು, ಮಂಗಳೂರು, ಮೈಸೂರು, ಹೈದರಾಬಾದ್‌, ಚೆನ್ನೈ, ವಿಶಾಖಪಟ್ಟಣ, ಕೊಚ್ಚಿ, ಅಮರಾವತಿ, ವಿಜಯವಾಡ ಮತ್ತು ಪುದುಚೇರಿ ನಗರಗಳಲ್ಲಿ ಗಾಳಿಯ ಗುಣಮಟ್ಟವನ್ನು ವಿಶ್ಲೇಷಿಸಿದೆ.

ಈ ಹತ್ತು ನಗರಗಳ ಪೈಕಿ ವಿಶಾಖಪಟ್ಟಣಂನಲ್ಲಿ ಗಾಳಿಯ ಗುಣಮಟ್ಟ ತೀವ್ರ ಕುಸಿತ ಕಂಡಿದೆ ಎಂದು ವರದಿಯಲ್ಲಿ ಬಹಿರಂಗವಾಗಿದೆ.

ಈ ಹಿನ್ನೆಲೆಯಲ್ಲಿ ಜನತೆ ಕೂಡ ಬಹಳ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದ್ದು, ಅತಿಹೆಚ್ಚು ವಾಹನಗಳ ಓಡಾಟದ ಸ್ಥಳದಲ್ಲಿ ಮಾಸ್ಕ್‌ ಧರಿಸುವಂತೆ ಸೂಚನೆ ನೀಡಲಾಗಿದೆ.

 

Tags: