ಮೈಸೂರು: ಬಂಡೀಪುರ, ನಾಗರಹೊಳೆ ಸೇರಿದಂತೆ ಮತ್ತಿತರ ಸಮೃದ್ಧ ಅರಣ್ಯ ಪ್ರದೇಶಗಳಿಂದ ಸುತ್ತುವರಿದಿರುವ ಮೈಸೂರು ನಗರದ ಗಾಳಿಯ ಗುಣಮಟ್ಟ ತೀವ್ರ ಕಂಡಿದೆ ಎಂದು ಸಂಶೋಧನಾ ವರದಿಯಲ್ಲಿ ಬಹಿರಂಗವಾಗಿದೆ.
ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವ ಗ್ರೀನ್ ಪೀಸ್ ಸಂಶೋಧನಾ ವರದಿಯು, ವಾಯು ಮಾಲಿನ್ಯದಿಂದ ನಗರದ ಜನತೆಯ ಆರೋಗ್ಯದ ಮೇಲೆ ಬೀರುವ ಗಂಭೀರ ಪರಿಣಾಮಗಳ ಬಗ್ಗೆ ಸವಿವರವಾಗಿ ಹೇಳಿದೆ.
ಇನ್ನು ರಾಜ್ಯದ ಪ್ರಮುಖ ನಗರಗಳಾದ ಮೈಸೂರು, ಬೆಂಗಳೂರು ಹಾಗೂ ಮಂಗಳೂರಿನಲ್ಲಿ ನಾವು ಉಸಿರಾಡುವ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಮಾಲಿನ್ಯದ ಪ್ರಮಾಣ ಅಪಾಯಕಾರಿ ಮಟ್ಟಕ್ಕೆ ತಲುಪಿದೆ. ಆದ್ದರಿಂದ ಕೂಡಲೇ ವಾಯು ಮಾಲಿನ್ಯ ತಗ್ಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಇದು ನಮ್ಮ ಆರೋಗ್ಯದ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತದೆ ಎಂದು ಹೇಳಿದೆ.
ಗ್ರೀನ್ ಪೀಸ್ ಸಂಶೋಧನಾ ವರದಿಯು ಹತ್ತು ನಗರಗಳಲ್ಲಿ ಅಧ್ಯಯನ ಮಾಡಿ ವರದಿ ಮಾಡಿದ್ದು, ಬೆಂಗಳೂರು, ಮಂಗಳೂರು, ಮೈಸೂರು, ಹೈದರಾಬಾದ್, ಚೆನ್ನೈ, ವಿಶಾಖಪಟ್ಟಣ, ಕೊಚ್ಚಿ, ಅಮರಾವತಿ, ವಿಜಯವಾಡ ಮತ್ತು ಪುದುಚೇರಿ ನಗರಗಳಲ್ಲಿ ಗಾಳಿಯ ಗುಣಮಟ್ಟವನ್ನು ವಿಶ್ಲೇಷಿಸಿದೆ.
ಈ ಹತ್ತು ನಗರಗಳ ಪೈಕಿ ವಿಶಾಖಪಟ್ಟಣಂನಲ್ಲಿ ಗಾಳಿಯ ಗುಣಮಟ್ಟ ತೀವ್ರ ಕುಸಿತ ಕಂಡಿದೆ ಎಂದು ವರದಿಯಲ್ಲಿ ಬಹಿರಂಗವಾಗಿದೆ.
ಈ ಹಿನ್ನೆಲೆಯಲ್ಲಿ ಜನತೆ ಕೂಡ ಬಹಳ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದ್ದು, ಅತಿಹೆಚ್ಚು ವಾಹನಗಳ ಓಡಾಟದ ಸ್ಥಳದಲ್ಲಿ ಮಾಸ್ಕ್ ಧರಿಸುವಂತೆ ಸೂಚನೆ ನೀಡಲಾಗಿದೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…