ಮೈಸೂರು ನಗರ

ಹೆಣ್ಣುಮಕ್ಕಳನ್ನು ಕಾಲೇಜಿಗೆ ಕರೆತನ್ನಿ: ಶಾಸಕ ಕೆ.ಹರಿಶ್‌ಗೌಡ

ಪಾದಯಾತ್ರೆ ಬಳಿಕ ನಡೆದ ಜನಸಂಪರ್ಕ ಸಭೆಯಲ್ಲಿ ಶಾಸಕ ಕೆ. ಹರೀಶ್ ಗೌಡ ಸಲಹೆ

ಕುಂಬಾರಕೊಪ್ಪಲು ಸರಕಾರಿ ಪಿಯು ಕಾಲೇಜಿನ 2 ಕೊಠಡಿ ಉದ್ಘಾಟನೆ

ಮೈಸೂರು: ಕುಂಬಾರಕೊಪ್ಪಲಿನ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರವೇಶಾತಿ ಹೆಚ್ಚಿಸಲು ವಿಶೇಷ ನೋಂದಣಿ ಅಭಿಯಾನ ಆರಂಭಿಸಿ, ಮುಖ್ಯವಾಗಿ ಹೆಣ್ಣುಮಕ್ಕಳನ್ನು ಕಾಲೇಜಿಗೆ ಸೇರಿಸಿ ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡ ಸಲಹೆ ನೀಡಿದರು.

ಮೈಸೂರು ಮಹಾನಗರ ಪಾಲಿಕೆ ವಾರ್ಡ್ ನಂ. 4 ರ ಹೆಬ್ಬಾಳು ಲೋಕನಾಯಕ ನಗರದಲ್ಲಿ ಸೋಮವಾರ ಪಾದಯಾತ್ರೆ ನಡೆಸಿ ಕುಂದುಕೊರತೆಗಳನ್ನು ಆಲಿಸಿ ಅಹವಾಲು ಸ್ವೀಕರಿಸಿದ ಬಳಿಕ ಕುಂಬಾರಕೊಪ್ಪಲು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಎರಡು ತರಗತಿ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು.

ಕುಂಬಾರಕೊಪ್ಪಲಿನ ಜನತೆ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲೆಂದು ಈ ಕಾಲೇಜಿಗೆ ಜಾಗ ನೀಡಿದ್ದಾರೆ. ಕಲೆ, ವಾಣಿಜ್ಯ ವಿಷಯದಲ್ಲಿ ಪಿಯುಸಿ ಅಧ್ಯಯನಕ್ಕೆ ಅವಕಾಶವಿದೆ. ಅಂತೆಯೆ ಈ ಕಾಲೇಜಿನ ಸುತ್ತ ಏಳು ವಾರ್ಡ್ಗಳಿದ್ದು ಕೇವಲ 65 ವಿದ್ಯಾರ್ಥಿಗಳು ಮಾತ್ರ ಪ್ರವೇಶಾತಿ ಪಡೆದಿರುವುದು ಬೇಸರದ ಸಂಗತಿ. ನಾನು ಕಾಲೇಜಿಗೆ ಬೇಕಾದ ಎಲ್ಲಾ ರೀತಿ ಸೌಲಭ್ಯಗಳನ್ನು ನೀಡಲು ಸಿದ್ದನಿದ್ದೇನೆ. ಕಾಲೇಜಿನ ಸಿಬ್ಬಂದಿಗಳು ವಿಶೇಷ ಅಭಿಯಾನದ ಮೂಲಕ ಕಾಲೇಜು ವ್ಯಾಪ್ತಿಯಲ್ಲಿರುವ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಈ ಕಾಲೇಜಿಗೆ ಪ್ರವೇಶಾತಿ ಪಡೆಯುವಂತೆ ಮನವೊಲಿಸಬೇಕು. ಈ ನಿಟ್ವಿನಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು 600 ಕ್ಕೆ ಏರಿಕೆ ಮಾಡಬೇಕೆಂದು ಸಲಹೆ ನೀಡಿದರು.

ಗ್ರಾಮೀಣ ಪ್ರದೇಶದ ಹೆಣ್ಣುಮಕ್ಕಳು ನಗರ ಪ್ರದೇಶದ ಕಾಲೇಜಿನಲ್ಲಿ ಸೇರಿಕೊಂಡು ಅಧ್ಯಯನ ಮಾಡಲು ಉಳಿದುಕೊಳ್ಳಲು ಜಾಗವಿಲ್ಲದೇ ಶಿಕ್ಷಣ ಮೊಟಕುಗೊಳಿಸುತ್ತಿದ್ದಾರೆ. ಇದರಿಂದ ಹೆಣ್ಣುಮಕ್ಕಳು ಅವಕಾಶ ವಂಚಿತರಾಗುತ್ತಾರೆ. ಆದರೆ ನಗರ ಪ್ರದೇಶದ ಮಕ್ಕಳಿಗೆ ಈ ರೀತಿ ಆಗಬಾರದು ಆ ನಿಟ್ಟಿನಲ್ಲಿ ಹೆಣ್ಣು ಮಕ್ಕಳು ಎಸ್ಎಸ್ಎಲ್ಸಿ ನಂತರ ಶಿಕ್ಷಣ ಮೊಟಕುಗೊಳಿಸುವುದನ್ನು ತಪ್ಪಿಸಿ ಎಂದು ತಿಳಿಸಿದರು.

ಕುಂಬಾರಕೊಪ್ಪಲು ಸರಕಾರಿ ಪದವಿಪೂರ್ವ ಕಾಲೇಜಿಗೆ ಕೊಳವೆ ಬಾವಿ ಮಂಜೂರಾಗಿದೆ. ಶಾಸಕರ ಅನುದಾನದಲ್ಲಿಯೇ ರಂಗಮಂದಿರ ಕಟ್ಟಿಸಿಕೊಡುತ್ತೇವೆ. ಮಾತ್ರವಲ್ಲದೇ ಹೆಣ್ಣುಮಕ್ಕಳಿಗೆ ಶೌಚಾಲಯ ನಿರ್ಮಿಸಿಕೊಡುವುದಾಗಿ ಶಾಸಕರು ಭರವಸೆ ನೀಡಿದರು.

ಪಾಲಿಕೆ ಮಾಜಿ ಸದಸ್ಯ ಪೈಲ್ವಾನ್ ಶ್ರೀನಿವಾಸ್, ಡಿಡಿಪಿಯು ಎಂ.ಮರಿಸ್ವಾಮಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ರವಿ ಮಂಚೇಗೌಡನಕೊಪ್ಪಲು, ಮುಖಂಡರಾದ ನಾಗಣ್ಣ, ಮಹೇಶ್, ಅನೀಲ್, ಪ್ರಾಂಶುಪಾಲ ಶಿವಕುಮಾರ್ ಹಾಗೂ ಇತರರು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

3 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

3 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

4 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

4 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

5 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

8 hours ago