ಮೈಸೂರು: ಬೃಹತ್ ಗಾತ್ರದ ಮರದ ಕೊಂಬೆಯೊಂದು ಏಕಾಏಕಿ ಮುರಿದು ಬಿದ್ದ ಪರಿಣಾಮ ಮೂರು ದ್ವಿಚಕ್ರ ವಾಹನಗಳು ಜಖಂಗೊಂಡಿರುವ ಘಟನೆ ಮೈಸೂರಿನ ಅಗ್ರಹಾರ-ಪಾಠಶಾಲೆ ವೃತ್ತದ ನಡುವಿನ ರಸ್ತೆಯಲ್ಲಿ ನಡೆದಿದೆ.
ಇಂದು ಮಧ್ಯಾಹ್ನ ಮಳೆ, ಗಾಳಿ ಇಲ್ಲದಿದ್ದರೂ ಏಕಾಏಕಿ ಮರದ ಕೊಂಬೆ ಮುರಿದು ಬಿದ್ದ ಪರಿಣಾಮ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ಮೂರು ದ್ವಿಚಕ್ರ ವಾಹನಗಳು ಜಖಂಗೊಂಡಿವೆ.
ಸದ್ಯ ಅಕ್ಕಪಕ್ಕದಲ್ಲಿ ಯಾವುದೇ ಜನರ ಒಡಾಟವಿಲ್ಲದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ. ಸ್ಥಳದಲ್ಲಿ ಸ್ಥಳೀಯರಿಂದಲೇ ತೆರವು ಕಾರ್ಯಾಚರಣೆ ನಡೆದಿದ್ದು, ಅರ್ಧಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.





