ಮೈಸೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇರಳದಲ್ಲಿ ಕನ್ನಡ ಶಾಲೆಗಳನ್ನು ಬಂದ್ ಮಾಡಿಸಲು ಹೊರಟಿದ್ದಾರೆ ಎಂದು ಆರೋಪಿಸಿ ಕನ್ನಡಪರ ಸಂಘಟನೆ ಹಾಗೂ ರೈತ ಸಂಘಟನೆ ವತಿಯಿಂದ ಪೊರಕೆ ಚಳುವಳಿ ನಡೆಸಲಾಯಿತು.
ಮೈಸೂರಿನ ಅಗ್ರಹಾರ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಕೇರಂ ಸಿಎಂ ಪಿಣರಾಯಿ ವಿಜಯನ್ ಭಾವಚಿತ್ರಕ್ಕೆ ಪೊರಕೆಯಿಂದ ಹೊಡೆದು ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಕಾಸರಗೋಡಿನಲ್ಲಿ 200ಕ್ಕೂ ಕನ್ನಡ ಶಾಲೆಗಳನ್ನು ರಾಜ್ಯ ಸರ್ಕಾರವೇ ಆರಂಭಿಸಬೇಕು. ಮೊದಲು ಕನ್ನಡ ವಿರೋಧಿ ನೀತಿ ಬಿಡಬೇಕು. ಕನ್ನಡ ಶಾಲೆಗಳಿಗೆ ತೊಂದರೆ ಕೊಡಬಾರದು. ಒಂದು ವೇಳೆ ತೊಂದರೆ ಕೊಡುವುದೇ ಆದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.





