Mysore
27
few clouds

Social Media

ಗುರುವಾರ, 22 ಜನವರಿ 2026
Light
Dark

ಪ್ರವಾಸದ ವೇಳೆ ಬಸ್ ಪಲ್ಟಿ ಪ್ರಕರಣ: ಮೈಸೂರಿಗೆ ಆಗಮಿಸಿದ ಪ್ರವಾಸಕ್ಕೆ ತೆರಳಿದ್ದ ಮಕ್ಕಳು

ಮೈಸೂರು: ಶಾಲಾ ಮಕ್ಕಳ ಪ್ರವಾಸದ ವೇಳೆ ಬಸ್ ಪಲ್ಟಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಂಜಾನೆ 3 ಗಂಟೆಗೆ ಮಕ್ಕಳೆಲ್ಲಾ ಮೈಸೂರಿಗೆ ಆಗಮಿಸಿದ್ದಾರೆ‌.

ಎರಡು ದಿನದ ಹಿಂದೆ ಬಸ್ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮೃತ ಬಾಲಕನ ಮೃತ ದೇಹವನ್ನು ನಿನ್ನೆಯೇ ತಂದು ಅಂತ್ಯಸಂಸ್ಕಾರ ನೆರವೇರಿಸಲಾಗಿದೆ‌.

ಪ್ರವಾಸಕ್ಕೆ ತೆರಳಿದ್ದ ಎಲ್ಲಾ ಮಕ್ಕಳು ಬಂದಿದ್ದಾರೆ. ಈ ಪೈಕಿ ನಾಲ್ಕು ಮಕ್ಕಳಿಗೆ ಸಣ್ಣ ಪುಟ್ಟ ಗಾಯವಾಗಿರುವ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಕ್ಕಳ ಬರುವಿಕೆಗಾಗಿ ಕಾಯುತ್ತಿದ್ದ ಎಲ್ಲಾ ಪೋಷಕರು ನಿರಾಳರಾಗಿದ್ದಾರೆ.
ಪ್ರವಾಸಕ್ಕೆ ತೆರಳಿದ ಎಲ್ಲಾ ಮಕ್ಕಳ ಆರೋಗ್ಯ ತಪಾಸಣೆ ನಡೆಸುವುದಾಗಿ ಶಾಲಾ ಆಡಳಿತ ಮಂಡಳಿ ತಿಳಿಸಿದೆ.

Tags:
error: Content is protected !!