ಮೈಸೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳಿಗೆ ಸೋಲು ಉಂಟಾಗಿರುವುದು ಬೇಸರ ತಂದಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ತಿಳಿಸಿದ್ದಾರೆ.
ಈ ಕುರಿತು ಇಂದು(ನ.23) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಚುನಾವಣೆ ಫಲಿತಾಂಶದಲ್ಲಿ ಈ ಮಟ್ಟಕ್ಕೆ ಮುಖಭಂಗ ಆಗುತ್ತೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಬಿಜೆಪಿ ಹಾಗೂ ಎನ್‌ಡಿಎ ಅಭ್ಯರ್ಥಿಗಳು ಗೆಲ್ಲುತ್ತಾರೆಂಬ ನಿರೀಕ್ಷೆಯಿತ್ತು. ಆದರೆ ಹಗರಣಗಳನ್ನು ನಡೆಸಿರುವ ಕಾಂಗ್ರೆಸ್ ಪಕ್ಷವೇ ಗೆಲುವು ಸಾಧಿಸಿದೆ ಎಂದರೇ ಅಶ್ಷರ್ಯವಾಗಿದೆ ಎಂದಿದ್ದಾರೆ.
ಉಪಚುನಾವಣೆಯ ಮೂಲಕ ನಮ್ಮ ಪಕ್ಷದಲ್ಲಿ ನಾವೆಲ್ಲಿ ಎಡವಿದ್ದೀವಿ ಎಂದು ಅವಲೋಕನ ಮಾಡಿಕೊಳ್ಳಬೇಕಿದೆ. ಮುಂದಿನ ಮೂರುವರೆ ವರ್ಷಗಳಲ್ಲಿ ಎಚ್ಚರಿಕೆ ಹೆಜ್ಜೆಯನ್ನಿಟ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕಿದೆ. ಪಕ್ಷದಲ್ಲಿ ಭಿನ್ನಾಭಿಪ್ರಾಯ, ಬಣ ರಾಜಕೀಯ ಎಲ್ಲವನ್ನ ಬಿಟ್ಟು ನಾವು ಒಂದಾಗಿ ಕೆಲಸ ಮಾಡಬೇಕಾದ ಅವಶ್ಯಕತೆ ಇದೆ ಈಗ ಕಾಂಗ್ರೆಸ್ ಗೆಲುವು ಸಾಧಿಸಿರುವುದಕ್ಕೆ ಸರ್ಕಾರದ ಗ್ಯಾರಂಟಿ ಯೋಜನೆಗಳು ಸ್ವಲ್ಪ ಪರಿಣಾಮ ಬೀರಿರಬಹುದು. ಅಲ್ಲದೇ ಈ ಗೆಲುವು ಸರ್ಕಾರದ ಆತ್ಮವಿಶ್ವಾಸ ಹೆಚ್ಚಿಸಿದೆ ಎಂದು ಹೇಳಿದ್ದಾರೆ.