ಮೈಸೂರು : ಭೈರತಿ ಸುರೇಶ್ ಒಬ್ಬ ರಿಯಲ್ ಎಸ್ಟೇಟ್ ಗಿರಾಕಿ, ಬರಿ ಬೊಗಳೆ ಬಿಡುತ್ತಾನೆ ಎಂದು ಏಕವಚನದಲ್ಲೇ ಭೈರತಿ ಸುರೇಶ್ ರನ್ನ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ವಾಗ್ದಾಳಿ ನಡೆಸಿದ ಹಳ್ಳಿಹಕ್ಕಿ, ಹೆಲಿಕಾಷ್ಟರ್ ನಲ್ಲಿ ಬಂದು ಪೊಲೀಸ್ ಭದ್ರತೆಯಲ್ಲಿ ಸಭೆ ಮಾಡಿ ಹೋಗುತ್ತಾನೆ. ಸಭೆಯ ಬಳಿಕ ಅದು ಕ್ಯಾನ್ಸಲ್ ಮಾಡಿದ್ದೀನಿ. ಅದು ಮಾಡಿದ್ದೀನಿ, ಇದು ಮಾಡಿದ್ದೀನಿ ಎಂದು ಹೇಳ್ತಾನೆ. ಒಂದಕ್ಕಾದ್ರೂ ಆದೇಶ ಬಂದಿದಿಯಾ..? ಬರಿ ಬೊಗಳೆ ಬಿಡುತ್ತಾನೆ. ನೀನು ಯಾವನಲೇ ..? ನೀನು ದಡ್ಡನೋ ಬುದ್ದಿವಂತನಾ..? ನಾನು ಏಳು ಸೈಟ್ ಕೇಳಿದ್ದೇನೆ ಅಂತೀಯಲ್ಲ. ಇವ್ನು ಯಾವನ್ರೀ ಎಂದು ಏಕವಚನದಲ್ಲೆ ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.
ಅಲ್ಲದೆ ನಾನು ಪ್ರಾಮಾಣಿಕ ಅಂತ ವಿಧಾನಸೌಧದ ಒಳಗೆ ಹೇಳಿದ್ದೀನಿ. ಈ ಭೈರತಿ ಸುರೇಶ್ ಚೇಂಜ್ ಆಫ್ ಲ್ಯಾಂಡ್ ಗೆ ಐದು ಲಕ್ಷ ಫಿಕ್ಸ್ ಮಾಡಿದ್ದಾನೆ ಎಂದು ಕಿಡಿಕಾರಿದರು.
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…