ಮೈಸೂರು ನಗರ

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ ಶಾಕಿಂಗ್‌ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಕಚೇರಿಯಲ್ಲಿ ಇಂದು ತನಿಖೆ ನಡೆಸಲು ಇ.ಡಿ.ದಾಳಿ ನಡೆಸಿದ್ದಾರೆ. ಆದರೆ ಇ.ಡಿ.ಅಧಿಕಾರಿಗಳಿಗೆ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವ ಫೈಲ್‌ಗಳು ಸಹ ದೊರೆಯುವುದಿಲ್ಲ. ಏಕೆಂದರೆ ಮುಡಾ ಪ್ರಕರಣದ ಫೈಲ್‌ಗಳು ಕಚೇರಿಯಲ್ಲಿರುವುದಕ್ಕಿಂತ ಅಧಿಕವಾಗಿ ಸಚಿವ ಭೈರತಿ ಸುರೇಶ್‌ ಅವರ ಮನೆಯಲ್ಲಿಯೇ ಇವೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇ.ಡಿ.ಮೊದಲು ಸಚಿವ ಭೈರತಿ ಸುರೇಶ್‌ ಅವರ ನಿವಾಸ ಮತ್ತು ಅವರ ಕಚೇರಿಯ ಮೇಲೆ ದಾಳಿ ಮಾಡಬೇಕು. ಮುಡಾದ ಅನೇಕ ಫೈಲ್‌ಗಳನ್ನು ಹೆಲಿಕಾಫ್ಟರ್‌ ಮುಖಾಂತರ ಅವರು ಕೊಂಡ್ಯೊದಿದ್ದಾರೆ ಎಂದರು.

ಅರ್ಚನ ಎಸ್‌ ಎಸ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

3 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

3 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

3 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

3 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

4 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

4 hours ago