ಮೈಸೂರು: ಸಿ.ಪಿ.ಯೋಗೇಶ್ವರ್ ಒಬ್ಬ ಫ್ರಾಡ್ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ.
ಸಿ.ಪಿ.ಯೋಗೇಶ್ವರ್ ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಚ್.ವಿಶ್ವನಾಥ್ ಅವರು, ಮುಡಾ, ವಾಲ್ಮೀಕಿ ಫ್ರಾಡ್ ಜೊತೆಗೆ ಯೋಗೇಶ್ವರ್ ಎಂಬ ಮೂರನೇ ಫ್ರಾಡ್ ಸೇರಿಸಿಕೊಂಡು ಕಾಂಗ್ರೆಸ್ ಪಕ್ಷವನ್ನು ಹಾಳು ಮಾಡುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಈ ಉಪಚುನಾವಣೆಗಳಿಂದ ಯಾವುದೇ ರಾಜಕೀಯ ಬದಲಾವಣೆ ಆಗಲ್ಲ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಕೂಡ ಮೂರು ಪಾರ್ಟಿಗಳಲ್ಲಿ ಗುರುತಿಸಿಕೊಂಡಿದ್ದೇನೆ. ಆದರೆ ನಾನು ಎಂದಿಗೂ ನನ್ನ ತತ್ವ ಸಿದ್ಧಾಂತ ಬಿಟ್ಟಿಲ್ಲ. ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ಹಾಳು ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.





