ಮೈಸೂರು ನಗರ

ಸಂಪುಟ ಸಭೆಯನ್ನು ಮಹದೇಶ್ವರ ಬೆಟ್ಟದ ಬದಲು ಚಾ.ನಗರದಲ್ಲೇ ನಡೆಸಬೇಕಿತ್ತು: ವಾಟಾಳ್‌ ನಾಗರಾಜ್‌

ಮೈಸೂರು: ಸಚಿವ ಸಂಪುಟ ಸಭೆಯನ್ನು ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಸುವ ಬದಲು ಚಾಮರಾಜನಗರದಲ್ಲೇ ನಡೆಸಬೇಕಿತ್ತು ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅಭಿಪ್ರಾಯ ಪಟ್ಟಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ಇತ್ತೀಚಿಗೆ ಹಣೆ ಮೇಲೆ ಕುಂಕುಮ ಇಡೋದು, ದೇವಾಲಯಕ್ಕೆ ಹೋಗೋದು ಜಾಸ್ತಿಯಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಚಾಮರಾಜನಗರ ಅಭಿವೃದ್ಧಿಗೆ ವಿಶೇಷ ಘೋಷಣೆ ಕೊಡಬೇಕಿತ್ತು. ಈಗಿನ ಘೋಷಣೆ ಕಾರ್ಯಕ್ರಮಗಳು ನಾನು ಶಾಸಕನಾಗಿದ್ದಾಗಲೇ ಮಾಡಿದ್ದು. ಕ್ರೀಡಾಂಗಣ, ಜಿಲ್ಲಾಡಳಿತ ಭವನ, ನವ ಜಿಲ್ಲೆ ನಿರ್ಮಾಣ, ಕಾವೇರಿ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಕ್ರಮ ತಂದಿದ್ದು ನಾನು. ಈಗ ನನ್ನನ್ನೇ ಕಡೆಗಣಿಸಿ ಉದ್ಘಾಟನೆ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಇತ್ತೀಚೆಗೆ ಶಿಕ್ಷಕರು ಮತ್ತು ಪದವೀಧರರು ಮತಹಾಕಲು ಹಣ ಪಡೆಯುತ್ತಿದ್ದಾರೆ. ಇದಕ್ಕೆ ಕಳೆದ ಶಿಕ್ಷಕರ ಮತ್ತು ಪದವೀಧರ ಚುನಾವಣೆಯೇ ಸಾಕ್ಷಿ. ಇದು ಬೇಸರದ ಸಂಗತಿ. ಆ ಚುನಾವಣೆಯಲ್ಲಿ ನಾನೂ ಸ್ಪರ್ಧಿಸಿದ್ದೆ. ಒಂದು ವೋಟಿಗೆ 9 ಸಾವಿರ ಕೊಟ್ಟ ವಿವೇಕಾನಂದ ಶಿಕ್ಷಕರ ವೋಟ್ ಪಡೆದಿದ್ದಾನೆ. ಇವತ್ತಿನ ಪರಿಸ್ಥಿತಿಯಲ್ಲಿ ಒಂದು ಎಂಎಲ್‌ಸಿ ಸ್ಥಾನ ಗೆಲ್ಲಲು ಸುಮಾರು 25 ಕೋಟಿ ಬೇಕು. ಈಗಿನ ವ್ಯವಸ್ಥೆ ಎಲ್ಲಾ ಹಾಳಾಗಿ ಹೋಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

6 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

6 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

7 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

7 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

7 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

7 hours ago