ಮೈಸೂರು: ಸಚಿವ ಸಂಪುಟ ಪುನರ್ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯೆ ನೀಡಿದ್ದು, ಈ ಬಾರಿ ನನಗೆ ಅವಕಾಶ ಸಿಗುತ್ತದೆ ಎಂಬ ನಂಬಿಕೆಯಿದೆ ಎಂದು ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊನ್ನೆ ತಾನೇ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಮುಗಿಸಿ ಬಂದಿದ್ದಾರೆ. ನವೆಂಬರ್ ಕ್ರಾಂತಿ ಇಲ್ಲ ಎಂಬ ಸ್ಪಷ್ಟನೆ ಕೊಟ್ಟಿದ್ದಾರೆ. ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿದೆ. ಸಚಿವರ ಕಾರ್ಯವೈಖರಿ ಮಾಪನ ಮಾಡುವ ಕೆಲಸವನ್ನು ವರಿಷ್ಠರು ಮಾಡುತ್ತಿದ್ದಾರೆ. ಯಾರಿಗೆ ಹೈಕಮಾಂಡ್ ಅವಕಾಶ ಮಾಡುತ್ತೆ ಅವರಿಗೆ ಸಿಕ್ಕೇ ಸಿಗುತ್ತೆ. ಈ ಬಾರಿ ನನಗೆ ಅವಕಾಶ ಸಿಗುತ್ತೆ ಎನ್ನುವ ನಂಬಿಕೆ ಇದೆ. ಅವಕಾಶ ಸಿಗೋವರೆಗೂ ನಾನು ಕಾಯುತ್ತೇನೆ ಎಂದು ಹೇಳಿದರು.
ಇದನ್ನು ಓದಿ: ಮೈಸೂರು| ತನ್ವೀರ್ ಸೇಠ್‌ಗೆ ಸಚಿವ ಸ್ಥಾನ ನೀಡುವಂತೆ ಪತ್ರ ಚಳುವಳಿ
ಇನ್ನು ಕಾಂಗ್ರೆಸ್ ಕಾರ್ಯಕರ್ತರ ಪತ್ರ ಚಳುವಳಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಒತ್ತಡ ತರುವಂತ ಕೆಲಸವನ್ನು ಯಾವತ್ತು ಮಾಡಿಲ್ಲ. ವರಿಷ್ಠರು ಗುರುತಿಸಿ ಕೊಟ್ಟಾಗ ನಾನು ಅದನ್ನು ಸ್ವೀಕಾರ ಮಾಡುತ್ತೇನೆ. ಕಾರ್ಯಕರ್ತರು ಇಂತಹ ಕೆಲಸ ಮಾಡಬೇಡಿ. ಇದು ನನಗೆ ಮಾತ್ರವಲ್ಲ. ಕ್ಷೇತ್ರದ ಮತದಾರರಿಗೆ ಮಾಡುವ ಅಪಮಾನ. ಯಾರು ಈ ರೀತಿ ಮಾಡಬೇಡಿ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.
ಇನ್ನು ಸಿಎಂ ರೇಸ್‌ನಿಂದ ಡಿ.ಕೆ.ಶಿವಕುಮಾರ್ ಹಿಂದೆ ಸರಿದ್ರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ವೈಯಕ್ತಿಕವಾಗಿ ಆಸೆ ಇಟ್ಟುಕೊಳ್ಳಲು ಎಲ್ಲರಿಗೂ ಅವಕಾಶ ಇದೆ. ಆದ್ರೆ ನಾವೆಲ್ಲ ಒಂದು ವ್ಯವಸ್ಥೆ ಒಳಗೆ ಇದ್ದೇವೆ. ವರಿಷ್ಠರು ಏನು ತೀರ್ಮಾನ ಕೊಡ್ತಾರೆ ಅದೇ ಅಂತಿಮ. ಯಾರು ಬೇಕಾದರೂ ಮುಂದಿರ್ಲಿ ಹಿಂದೆ ಇರ್ಲಿ. ಆಸೆಗಳು ನೈಜ ಸ್ವರೂಪದಲ್ಲಿದ್ದಾಗ ಅವರಿಗೆ ಸ್ಪಂದನೆ ಸಿಗಲಿ ಎಂದು ಆಶಿಸುತ್ತೇನೆ ಎಂದು ಹೇಳಿದರು.
ಮೈಸೂರು : ತಿಬ್ಬಾಸ್ ಗ್ರೂಪ್ ಸಹಯೋಗದೊಂದಿಗೆ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ಆವರಣದಲ್ಲಿ ಡಿ.೨೮ರಂದು ‘ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ’ ಶೀರ್ಷಿಕೆಯಡಿ…
ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ೬೬/೧೧ ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ…
ಬೆಳಗಾವಿ : ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ…
ಬೆಳಗಾವಿ : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣ…
ಡಿಸಿ ಶಿಲ್ಪಾನಾಗ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…
ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ…