ಮೈಸೂರು ನಗರ

ಸಂಪುಟ ಪುನರ್ ರಚನೆ ವಿಚಾರ: ಈ ಬಾರಿ ಅವಕಾಶ ಸಿಗುತ್ತೆ ಎನ್ನುವ ನಂಬಿಕೆಯಿದೆ ಎಂದ ತನ್ವೀರ್‌ ಸೇಠ್‌

ಮೈಸೂರು: ಸಚಿವ ಸಂಪುಟ ಪುನರ್‌ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ತನ್ವೀರ್‌ ಸೇಠ್‌ ಪ್ರತಿಕ್ರಿಯೆ ನೀಡಿದ್ದು, ಈ ಬಾರಿ ನನಗೆ ಅವಕಾಶ ಸಿಗುತ್ತದೆ ಎಂಬ ನಂಬಿಕೆಯಿದೆ ಎಂದು ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊನ್ನೆ ತಾನೇ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಮುಗಿಸಿ ಬಂದಿದ್ದಾರೆ. ನವೆಂಬರ್ ಕ್ರಾಂತಿ ಇಲ್ಲ ಎಂಬ ಸ್ಪಷ್ಟನೆ ಕೊಟ್ಟಿದ್ದಾರೆ. ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿದೆ. ಸಚಿವರ ಕಾರ್ಯವೈಖರಿ ಮಾಪನ ಮಾಡುವ ಕೆಲಸವನ್ನು ವರಿಷ್ಠರು ಮಾಡುತ್ತಿದ್ದಾರೆ. ಯಾರಿಗೆ ಹೈಕಮಾಂಡ್ ಅವಕಾಶ ಮಾಡುತ್ತೆ ಅವರಿಗೆ ಸಿಕ್ಕೇ ಸಿಗುತ್ತೆ. ಈ ಬಾರಿ ನನಗೆ ಅವಕಾಶ ಸಿಗುತ್ತೆ ಎನ್ನುವ ನಂಬಿಕೆ ಇದೆ. ಅವಕಾಶ ಸಿಗೋವರೆಗೂ ನಾನು ಕಾಯುತ್ತೇನೆ ಎಂದು ಹೇಳಿದರು.

ಇದನ್ನು ಓದಿ: ಮೈಸೂರು| ತನ್ವೀರ್‌ ಸೇಠ್‌ಗೆ ಸಚಿವ ಸ್ಥಾನ ನೀಡುವಂತೆ ಪತ್ರ ಚಳುವಳಿ

ಇನ್ನು ಕಾಂಗ್ರೆಸ್‌ ಕಾರ್ಯಕರ್ತರ ಪತ್ರ ಚಳುವಳಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಒತ್ತಡ ತರುವಂತ ಕೆಲಸವನ್ನು ಯಾವತ್ತು ಮಾಡಿಲ್ಲ. ವರಿಷ್ಠರು ಗುರುತಿಸಿ ಕೊಟ್ಟಾಗ ನಾನು ಅದನ್ನು ಸ್ವೀಕಾರ ಮಾಡುತ್ತೇನೆ. ಕಾರ್ಯಕರ್ತರು ಇಂತಹ ಕೆಲಸ ಮಾಡಬೇಡಿ. ಇದು ನನಗೆ ಮಾತ್ರವಲ್ಲ. ಕ್ಷೇತ್ರದ ಮತದಾರರಿಗೆ ಮಾಡುವ ಅಪಮಾನ. ಯಾರು ಈ ರೀತಿ ಮಾಡಬೇಡಿ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.

ಇನ್ನು ಸಿಎಂ ರೇಸ್‌ನಿಂದ ಡಿ.ಕೆ.ಶಿವಕುಮಾರ್‌ ಹಿಂದೆ ಸರಿದ್ರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ವೈಯಕ್ತಿಕವಾಗಿ ಆಸೆ ಇಟ್ಟುಕೊಳ್ಳಲು ಎಲ್ಲರಿಗೂ ಅವಕಾಶ ಇದೆ. ಆದ್ರೆ ನಾವೆಲ್ಲ ಒಂದು ವ್ಯವಸ್ಥೆ ಒಳಗೆ ಇದ್ದೇವೆ. ವರಿಷ್ಠರು ಏನು ತೀರ್ಮಾನ ಕೊಡ್ತಾರೆ ಅದೇ ಅಂತಿಮ. ಯಾರು ಬೇಕಾದರೂ ಮುಂದಿರ್ಲಿ ಹಿಂದೆ ಇರ್ಲಿ. ಆಸೆಗಳು ನೈಜ ಸ್ವರೂಪದಲ್ಲಿದ್ದಾಗ ಅವರಿಗೆ ಸ್ಪಂದನೆ ಸಿಗಲಿ ಎಂದು ಆಶಿಸುತ್ತೇನೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

18 seconds ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

6 mins ago

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

13 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

14 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

16 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

18 hours ago