ಮೈಸೂರು ನಗರ

ರಾಮಚಂದ್ರರಾವ್‌ ಮೇಲಿನ ಅಮಾನತು ಆದೇಶ ರದ್ದು: ಎಚ್.ವಿಶ್ವನಾಥ್‌ ಆಕ್ಷೇಪ

ಮೈಸೂರು: ಹಿರಿಯ ಪೊಲೀಸ್‌ ಅಧಿಕಾರಿ ರಾಮಚಂದ್ರರಾವ್‌ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್‌ ಎಚ್.ವಿಶ್ವನಾಥ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಮಚಂದ್ರರಾವ್ ಈ ಹಿಂದೆ ಕೇರಳ ಬಸ್‌ನಲ್ಲಿ ಸಿಕ್ಕಿದ್ದ 2 ಕೋಟಿ ಹಣವನ್ನು ಕೊಂಡೊಯ್ದು ಇನ್ಸ್‌ಪೆಕ್ಟರ್ ವಿರುದ್ಧ ಪ್ರಕರಣ ದಾಖಲಿಸಿದ್ದ ನಟೋರಿಯಸ್. ಅವರ ಸಾಕು ಮಗಳು ರನ್ಯಾರಾವ್ ಚಿನ್ನಸಾಗಣೆ ಪ್ರಕರಣದಲ್ಲಿ ಸಿಕ್ಕಿಬಿದ್ದ ಪರಿಣಾಮ ರಾಮಚಂದ್ರ ರಾವ್ ಅವರನ್ನು ಅಮಾನತು ಮಾಡಲಾಗಿತ್ತು. ಅಲ್ಲದೇ ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಸಹ ಕೇಳಿಬಂದಿತ್ತು. ನ್ಯಾಯ ಕೇಳಲು ಬಂದಿದ್ದ ಮಹಿಳೆಯ ಮೇಲೆ ರಾಮಚಂದ್ರ ರಾವ್ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾದ ವೀಡಿಯೋ ನನ್ನದಲ್ಲ ಎಂದು ವಾದಿಸಿದ್ದರು. ಆ ನಂತರ ವಿಧಿ ವಿಜ್ಞಾನ ಪ್ರಯೋಗಾಲಯದ ನೀಡಿದ ವರದಿಯಲ್ಲಿ ಆ ವೀಡಿಯೋ ರಾಮಚಂದ್ರರಾವ್ ಅವರದ್ದೇ ಎಂಬುದು ಸಾಬಿತಾದ ಕಾರಣ ಅವರನ್ನು ಸರ್ಕಾರ ಅಮಾನತು ಮಾಡಿತ್ತು. ಇದೀಗ ಏಕಾಏಕಿ ಅವರ ಮೇಲಿನ ಅಮಾನತು ಆದೇಶ ಹಿಂಪಡೆದು ಮತ್ತೆ ಕರ್ತವ್ಯಕ್ಕೆ ನಿಯೋಜಿಸಿರುವುದು ಸರಿಯಲ್ಲ‌. ಈ ಸರ್ಕಾರದಲ್ಲಿ ನ್ಯಾಯಕ್ಕೆ ಬೆಲೆ ಇಲ್ಲದಂತಾಗಿದೆ. ಗೃಹ ಇಲಾಖೆಯನ್ನು ಪರಮೇಶ್ವರ್ ನಡೆಸುತ್ತಿದ್ದಾರೋ ಅಥವಾ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ನಡೆಸುತ್ತಿದ್ದಾರಾ ಎಂಬ ಅನುಮಾನವಿದೆ. ರಾಮಚಂದ್ರ ರಾವ್ ಮೇಲಿನ ಅಮಾನತು ಆದೇಶ ಹಿಂಪಡೆಯಲು ದೊಡ್ಡ ಮಟ್ಟದ ಕಿಕ್ ಬ್ಯಾಕ್ ಪಡೆದಿರಬಹುದು. ರಾಜ್ಯದಲ್ಲಿ ಯಾವ ಸೀಮೆಯ ಅಧಿಕಾರ ನಡೆಯುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಮೇ.9ಕ್ಕೆ ಚಿತ್ರದುರ್ಗದಲ್ಲಿ ಆಯೋಜಿಸಿರುವ ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಕಿಡಿಕಾರಿದ ಅವರು, ಪೋಕ್ಸೋ ಕೇಸ್ ಪ್ರಕರಣದ ಆರೋಪಕ್ಕೆ ಯಡಿಯೂರಪ್ಪ ಗುರಿಯಾಗಿದ್ದಾರೆ. ಇದು ಗಂಭೀರ ಪ್ರಕರಣವಾಗಿದೆ. ಆದರೂ ಇದೀಗ ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಮುಂದಾಗಿರುವುದು ಸರಿಯಲ್ಲ. ಈ ಎರಡು ಪ್ರಕರಣಗಳು ರಾಜ್ಯಕ್ಕೆ ಕಪ್ಪುಚುಕ್ಕೆಯಾಗಿ ಪರಿಣಮಿಸಿವೆ. ವಕೀಲ ಸಿದ್ದರಾಮಯ್ಯಗೆ ಇದೆಲ್ಲ ಗೊತ್ತಿಲ್ಲವೇ ಎಂದು ಪ್ರಶ್ನೆ ಮಾಡಿದರು.

 

 

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

5 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

5 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

16 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

16 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

16 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

16 hours ago