Mysore
27
scattered clouds

Social Media

ಬುಧವಾರ, 01 ಏಪ್ರಿಲ 2026
Light
Dark

ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಮೇಣದಬತ್ತಿ ಹಿಡಿದು ಶ್ರದ್ಧಾಂಜಲಿ

ಮೈಸೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಹಲವರು ಸಾವನ್ನಪ್ಪಿದ್ದಾರೆ.

ಉಗ್ರರ ದಾಳಿಗೆ ಸಿಲುಕಿ ಸಾವನ್ನಪ್ಪಿರುವವರಿಗೆ ಮೈಸೂರು ನಗರ ಬಿಜೆಪಿ ವತಿಯಿಂದ ಮೇಣದ ಬತ್ತಿ ಹಿಡಿದು ಮೆರವಣಿಗೆ ನಡೆಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಮೈಸೂರು ನ್ಯಾಯಾಲಯದ ಮುಂಭಾಗವಿರುವ ಗಾಂಧೀಜಿ ಪ್ರತಿಮೆ ಬಳಿಯಿಂದ ಆರಂಭವಾದ ಜಾಥಾವು ಪ್ರಮುಖ ರಸ್ತೆಗಳಲ್ಲಿ ಸಾಗಿತು.

ಮೇಣದ ಬತ್ತಿ ಹಿಡಿದು ಜಾಥಾ ಹೊರಟ ಬಿಜೆಪಿ ಕಾರ್ಯಕರ್ತರು, ಶಾಂತಿಯಿಂದ ಕೂಡಿದ್ದ ಜಮ್ಮು-ಕಾಶ್ಮೀರದಲ್ಲಿ ಗುಂಡಿನ ದಾಳಿ ನಡೆಸಿ ಅನೇಕರ ಸಾವಿಗೆ ಕಾರಣರಾದ ಉಗ್ರರ ವಿರುದ್ಧ ಕಿಡಿಕಾರಿದರು.

ಮಾಜಿ‌ ಶಾಸಕ ಎಲ್‌.ನಾಗೇಂದ್ರ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.

Tags:
error: Content is protected !!