vidyasiri scholarship details siddaramaiah
ಮೈಸೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಹಲವರು ಸಾವನ್ನಪ್ಪಿದ್ದಾರೆ.
ಉಗ್ರರ ದಾಳಿಗೆ ಸಿಲುಕಿ ಸಾವನ್ನಪ್ಪಿರುವವರಿಗೆ ಮೈಸೂರು ನಗರ ಬಿಜೆಪಿ ವತಿಯಿಂದ ಮೇಣದ ಬತ್ತಿ ಹಿಡಿದು ಮೆರವಣಿಗೆ ನಡೆಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಮೈಸೂರು ನ್ಯಾಯಾಲಯದ ಮುಂಭಾಗವಿರುವ ಗಾಂಧೀಜಿ ಪ್ರತಿಮೆ ಬಳಿಯಿಂದ ಆರಂಭವಾದ ಜಾಥಾವು ಪ್ರಮುಖ ರಸ್ತೆಗಳಲ್ಲಿ ಸಾಗಿತು.
ಮೇಣದ ಬತ್ತಿ ಹಿಡಿದು ಜಾಥಾ ಹೊರಟ ಬಿಜೆಪಿ ಕಾರ್ಯಕರ್ತರು, ಶಾಂತಿಯಿಂದ ಕೂಡಿದ್ದ ಜಮ್ಮು-ಕಾಶ್ಮೀರದಲ್ಲಿ ಗುಂಡಿನ ದಾಳಿ ನಡೆಸಿ ಅನೇಕರ ಸಾವಿಗೆ ಕಾರಣರಾದ ಉಗ್ರರ ವಿರುದ್ಧ
ಕಿಡಿಕಾರಿದರು.
ಮಾಜಿ ಶಾಸಕ ಎಲ್.ನಾಗೇಂದ್ರ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.
ಮೈಸೂರು : ಕುವೆಂಪುನಗರದ ನ್ಯೂ ಕಾಂತರಾಜ ಅರಸು ರಸ್ತೆಯಲ್ಲಿರುವ ಜನನಿಬಿಡ ಪ್ರದೇಶಗಳಾದ ಬಂದಂತಮ್ಮ ಕಾಳಮ್ಮ ದೇವಸ್ಥಾನ, ಐಗಿರಿ ಕೆಫೆ, ಸುಜ್ಹುಕಿ…
ಮೈಸೂರು : ಎಲ್ಲ ಅನುಕೂಲತೆಗಳಿದ್ದರೂ ವಿದ್ಯೆ ತಲೆಗೆ ಹತ್ತುತ್ತಿಲ್ಲ ಎನ್ನುವ ವಿದ್ಯಾರ್ಥಿಗಳ ನಡುವೆ, ಗಾರೆ ಕೆಲಸ ಮಾಡುವವರ ಪುತ್ರಿಯೊಬ್ಬರು ದ್ವಿತೀಯ…
ಮಂಜು ಕೋಟೆ ಎಚ್. ಡಿ. ಕೋಟೆ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಲ್ಲೂಕಿನ ತುಂಬಸೋಗೆಯ ಎಂಎಂಕೆ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ…
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್…