Mysore
21
mist

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಕಾರು-ಬೈಕ್‌ ನಡುವೆ ಅಪಘಾತ: 5 ವರ್ಷದ ಮಗು ಸಾವು

ಮೈಸೂರು: ಕಾರು ಹಾಗೂ ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಐದು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಮೈಸೂರಿನ ಇಲವಾಲದ ಬಳಿ ನಡೆದಿದೆ.

ಲಿಖಿತ್‌ ಎಂಬುವವನೇ ಅಪಘಾತದಲ್ಲಿ ಸಾವನ್ನಪ್ಪಿರುವ ಪುಟ್ಟ ಕಂದಮ್ಮನಾಗಿದ್ದಾನೆ. ಇಲವಾಲದ ಪೆಟ್ರೋಲ್‌ ಬಂಕ್‌ ಬಳಿ ಈ ಘಟನೆ ನಡೆದಿದ್ದು, ಬೈಕ್‌ಗೆ ಹಿಂದೆ ಬಂದ ಕಾರೊಂದು ಗುದ್ದಿದೆ.

ಪರಿಣಾಮ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, ಪೋಷಕರಿಗೆ ಸಣ್ಣ-ಪುಟ್ಟ ಗಾಯಗಳಾಗಿದೆ.

ಇನ್ನು ಈ ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಈ ಸಂಬಂಧ ಇಲವಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Tags:
error: Content is protected !!