ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ.
ವಿಜಯನಗರದ ಕೊಡವ ಸಮಾಜದ ಬಳಿ ಗುರುವಾರ ಸಂಜೆ ಈ ಘಟನೆ ನಡೆದಿದೆ. ಅಪಘಾತದಿಂದಾಗಿ ಕಾರಿನಲ್ಲಿದ್ದ ಶ್ರೀನಿವಾಸ್ ಎಂಬ ಯುವಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಮತ್ತೊಂದು ಕಾರಿನಲ್ಲಿದ್ದ ನಿತಿನ್ ಕಾಲಿಗೆ ಹಾಗೂ ಜತೆಯಲ್ಲಿದ್ದ ಇನ್ನೋರ್ವ ಯುವಕನಿಗೆ ಗಂಭೀರ ಗಾಯವಾಗಿದೆ.
ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅತೀ ವೇಗವಾಗಿ ವಾಹನ ಚಲಾಯಿಸಿದ್ದೆ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಸಂಬಂಧ ವಿವಿ ಪುರಂ ಪೊಲೀಸರು ಸ್ಥಳಕ್ಕಾಗಿಮಿಸಿ ಕ್ರಮ ಕೈಗೊಂಡಿದ್ದಾರೆ.





