Mysore
30
scattered clouds

Social Media

ಶನಿವಾರ, 26 ಏಪ್ರಿಲ 2025
Light
Dark

ಮೈಸೂರು| ಕಾರಿನ ಟೈರ್‌ ಸಿಡಿದು ಮತ್ತೊಂದು ಕಾರಿಗೆ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ

ಮೈಸೂರು: ಕಾರಿನ ಟೈರ್ ಸಿಡಿದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೇಟಗಳ್ಳಿಯ ಆರ್‌ಬಿಐ ಬಳಿ ರಿಂಗ್ ರಸ್ತೆಯಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ.
ಮಣಿಪಾಲ್ ಜಂಕ್ಷನ್ ಕಡೆಯಿಂದ ಬರುತ್ತಿದ್ದ ಕಾರಿನ ಟೈರ್ ಸ್ಪೋಟ ಗೊಂಡಿದ್ದರಿಂದ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ. ಈ ವೇಳೆ ಹಿಂದೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಬೆಂಗಳೂರು ಮೂಲದ ಇಬ್ಬರು ಗಾಯಗೊಂಡಿದ್ದಾರೆ. ತಕ್ಷಣ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ವಿವಿ ಪುರಂ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Tags: