yaduveer wodeyer
ಮೈಸೂರು: ಈಗಾಗಲೇ ನಮ್ಮ ಕೇಂದ್ರ ಸರ್ಕಾರ ಜನಗಣತಿಯ ಜೊತೆ ಜಾತಿಗಣತಿ ಮಾಡಲು ನಿರ್ಧಾರ ಮಾಡಿದೆ. ಆದ್ದರಿಂದ ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಜಾತಿಗಣತಿ ಮಾಡುವ ಅವಶ್ಯಕತೆಯಿಲ್ಲ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಿಡಿಕಾಡಿದ್ದಾರೆ.
ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ನಾಯಕರು ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ಜಾತಿಗಣತಿ ವಿಚಾರವಾಗಿ ಯಾರಿಗೂ ತೃಪ್ತಿ ಸಿಕ್ಕಿಲ್ಲ. ತೆರಿಗೆ ಹಣ ಬಳಸಿ ಗಣತಿ ಮಾಡಿದ್ದಾರೆ. ಅದನ್ನು ಬಿಡುಗಡೆ ಮಾಡದೆ ತಮಾಷೆ ಮಾಡಿದ್ದಾರೆ. ಅವರ ಹೈಕಮಾಂಡ್ ಹೇಳಿದೆ ಎಂದು ಕಸದ ಬುಟ್ಟಿಗೆ ಹಾಕಿದ್ರು.
ಈಗ ಮತ್ತೆ ಹಣ ಖರ್ಚು ಮಾಡಿ ಜಾತಿಗಣತಿ ಮಾಡಲು ಹೊರಟಿದ್ದಾರೆ. ಈಗಾಗಲೇ ನಮ್ಮ ಕೇಂದ್ರ ಸರ್ಕಾರ ಗಣತಿ ಮಾಡಲು ನಿರ್ಧಾರ ಮಾಡಿದೆ. ಕೇಂದ್ರ ಸರ್ಕಾರ ಒಳ್ಳೆಯ ಗಣತಿ ಮಾಡುತ್ತದೆ. ಕಾಂಗ್ರೆಸ್ ಕೇಂದ್ರದಲ್ಲಿ ಅವಕಾಶ ಸಿಕ್ಕಾಗ ಗಣತಿ ಮಾಡಿಲ್ಲ. ಕರ್ನಾಟಕದಲ್ಲಿ ಜಾತಿಗಣತಿ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದರು.
ಇನ್ನು ಸಾಧನಾ ಸಮಾವೇಶದಲ್ಲಿ ಅಭಿವೃದ್ಧಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅಭಿವೃದ್ಧಿ ವಿಚಾರವಾಗಿ ಸವಾಲು ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಬಗ್ಗೆ ಸಿದ್ದರಾಮಯ್ಯ ಮಾತನಾಡುವುದನ್ನು ಬಿಟ್ಟು ಒಂದು ಪತ್ರ ಹೊರಡಿಸಲಿ. ಅದಕ್ಕೆ ನಾವು ಉತ್ತರ ಕೊಡುತ್ತೇವೆ ಎಂದು ಹೇಳಿದರು.
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…
ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…
ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…