ಮೈಸೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಜಾತಿ ಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದ ಮೂಲಕ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಜಾತಿ ಗಣತಿಯ ನೈಜತೆಯ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ಮನವಿ ಮಾಡಿ ಒಂದು ವರ್ಷದ ಹಿಂದೆಯೇ ಸಿಎಂ ಸಿದ್ದರಾಮಯ್ಯ,ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದರು. ಇ ಮೇಲ್ ಮೂಲಕ ಮತ್ತು ನೋಂದಾಯಿತ ಅಂಚೆ ಮೂಲಕ ಪತ್ರ ಬರೆದಿದ್ದ ಸ್ನೇಹಮಯಿ ಕೃಷ್ಣಗೆ ಇದುವರೆಗೂ ಯಾವುದೇ ಸ್ಪಷ್ಟನೆ ಬಂದಿಲ್ಲ.
ಇದನ್ನೂ ಓದಿ:-ಜಾತಿಗಣತಿ ವರದಿಯಲ್ಲಿ ಒಕ್ಕಲಿಗ ಸಮಾಜಕ್ಕೆ ಅನ್ಯಾಯವಾದರೆ ಸಿಡಿದೇಳಬೇಕಾಗುತ್ತದೆ:ಡಿ.ವಿ.ಸದಾನಂದಗೌಡ
ಈ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಸ್ನೇಹಮಯಿ ಕೃಷ್ಣ ಅವರು, ಇದುವರೆಗೂ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದೆ ಸುಳ್ಳು ಸೃಷ್ಟನೆಯಾಗಿರುವ ಮತ್ತು ದೊಡ್ಡ ಮಟ್ಟದ ಅಪರಾಧ ಕೃತ್ಯವಾಗಿರುವ ಜಾತಿ ಗಣತಿಗೆ ಮನ್ನಣೆ ನೀಡಲು ಪ್ರಯತ್ನಿಸುತ್ತಿರುವ ಬಗ್ಗೆ ಸಿದ್ದರಾಮಯ್ಯ, ಮುಖ್ಯ ಕಾರ್ಯದರ್ಶಿ, ಸುಳ್ಳು ವರದಿ ನೀಡಿರುವವರ ವಿರುದ್ದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ ಎಂದು ಆಗ್ರಹಿಸಿದ್ದಾರೆ.
ಹೆಚ್ಚಿನ ಸಿದ್ದಿ: ಇದು ಜಾತಿಗಣತಿಯೋ, ದ್ವೇಷಗಣತಿಯೋ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ
ಒಟ್ಟಾರೆ ರಾಜ್ಯದಲ್ಲಿ ಜಾತಿ ಗಣತಿ ವರದಿಯ ಕಿಚ್ಚು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದು ಮುಂದಿನ ದಿನಗಳಲ್ಲಿ ಏನೆಲ್ಲಾ ಬೆಳವಣಿಗೆಗೆ ಸಾಕ್ಷಿಯಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…