ಮೈಸೂರು ನಗರ

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು. ಇದೀಗ ಪೊಲೀಸರು ಕೃಷ್ಣ ಅವರ ಮೈಸೂರು ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.

ಶುಕ್ರವಾರ ಬೆಳಿಗ್ಗೆ ಬೆಂಗಳೂರಿನ ನ್ಯಾಯಾಲಯದ ಬಳಿ ಕೃಷ್ಣ ಅವರನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರ ತಂಡ ಮದ್ಯಾಹ್ನ 3 ಗಂಟೆ ವೇಳೆಗೆ ಸರ್ಚ್ ವಾರೆಂಟ್ ಪಡೆದು ಮೈಸೂರಿಗೆ ಆಗಮಿಸಿದ್ದಾರೆ. ನಂತರ ನಗರದ ಗುಂಡುರಾವ್‌ನಗರದಲ್ಲಿರುವ ಅವರ ನಿವಾಸಕ್ಕೆ ತೆರಳಿದ ಅವರು ಮೊದಲಿಗೆ ಸ್ನೇಹಮಯಿ ಕೃಷ್ಣ ಅವರಿಗೆ ಸೇರಿದ್ದು ಎನ್ನಲಾದ ಶಿವ ಫೈನಾನ್ಸ್ ಕಚೇರಿಗೆ ತೆರಳಿ ಅಲ್ಲಿರುವ ಕಡತಗಳ ಪರಿಶೀಲನೆ ನಡೆಸಿದ್ದಾರೆ.

ನಂತರ ಕಚೇರಿಯ ಹಿಂಬಾಗವಿರುವ ಕೃಷ್ಣ ಅವರ ಮನೆಗೆ ತೆರಳಿ ಕುಟುಂಬದವರಿಗೆ ಸರ್ಚ್ ವಾರೆಂಟ್ ತೋರಿಸಿದ ಪೊಲೀಸರು, ನಂತರ ಮನೆಯಲ್ಲಿ ಸಂಪೂರ್ಣ ಪರಿಶೀಲನೆ ನಡೆಸಿದ್ದಾರೆ. ಈ ವಳೆ ಮನೆ ಹಾಗೂ ಕಚೇರಿಯಲ್ಲಿ ಇದ್ದ ಕೆಲ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ಸುಮಾರು 2 ಗಂಟೆಗಳ ಕಾಲ ಪರಿಶೀಲನೆ ನಡೆಸಿದ ಸಿಸಿಬಿಯ 6 ಪೊಲೀಸರ ತಂಡ ನಂತರ ಸ್ನೇಹಮಯಿ ಕೃಷ್ಣ ಅವರ ಬಂಡೀಪಾಳ್ಯದ ಮನೆಗೆ ತೆರಳಿ ಅಲ್ಲಿಯೂ ಕೂಡ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಕೆಲ ಮಹತ್ವದ ದಾಖಲೆಗಳು ಲಭ್ಯವಾಗಿವೆ ಎನ್ನಲಾಗಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

53 mins ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

55 mins ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

57 mins ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

58 mins ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

1 hour ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

1 hour ago