ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚಿಗೆ ಮಾದಕ ವಸ್ತುಗಳ (ಡ್ರಗ್ಸ್) ತಯಾರಿಕೆ ಮತ್ತು ಮಾರಾಟದ ಜಾಲಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರ ಸಿಸಿಬಿ (ಸೆಂಟ್ರಲ್ ಕ್ರೈಮ್ ಬ್ರಾಂಚ್) ಪೊಲೀಸರು ನಿಯಂತ್ರಣದಲ್ಲಿ ವೈಫಲ್ಯ ತೋರಿದ್ದಾರೆ. ಇದರಿಂದ ಆಕ್ರೋಶಗೊಂಡ ಮೈಸೂರು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಅವರು ಸಿಸಿಬಿ ಘಟಕಕ್ಕೆ ಗಂಭೀರ ಕ್ರಮ ಕೈಗೊಂಡಿದ್ದಾರೆ.
ಇತ್ತೀಚೆಗೆ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ತಯಾರಿಕಾ ಘಟಕ ಪತ್ತೆಯಾಗಿದ್ದು, ಇದನ್ನು ಕೇಂದ್ರ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಅಧಿಕಾರಿಗಳು ಭೇದಿಸಿದರು. ಈ ಘಟನೆಯ ನಂತರ ಸಿಸಿಬಿ ಪೊಲೀಸರ ನಿರ್ಲಕ್ಷ್ಯ ಮತ್ತು ಗುಪ್ತಚರ ವೈಫಲ್ಯ ಎದ್ದುಕಾಣುತ್ತಿದೆ. ಇದರ ಹಿನ್ನೆಲೆಯಲ್ಲಿ ಕಮಿಷನರ್ ಸೀಮಾ ಲಾಟ್ಕರ್ ಅವರು ಸಿಸಿಬಿ ಘಟಕದ 10 ಮಂದಿ ಸಿಬ್ಬಂದಿಯನ್ನು ವರ್ಗಾಯಿಸಿ, ಘಟಕಕ್ಕೆ ‘ಮೇಜರ್ ಸರ್ಜರಿ’ ನಡೆಸಿದ್ದಾರೆ.
ಸಾಕಷ್ಟು ವರ್ಷಗಳಿಂದ ಸಿಸಿಬಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾನ್ಸ್‌ಟೇಬಲ್ ಹಾಗೂ ಹೆಡ್ ಕಾನ್ಸ್‌ಟೇಬಲ್‌ಗಳನ್ನು ವರ್ಗಾವಣೆ ಮಾಡಲಾಗಿದೆ. ಅವರನ್ನು ಮೂಲ ಠಾಣೆಗಳಿಗೆ ಕಳುಹಿಸುವಂತೆ ಆದೇಶ ಹೊರಡಿಸಲಾಗಿದೆ. ಈ ಅಧಿಕಾರಿಗಳು ಮಾದಕ ವಸ್ತು ಮಾರಾಟ ಹಾಗೂ ಪೂರೈಕೆ ಜಾಲವನ್ನು ನಿಯಂತ್ರಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ, ಡ್ರಗ್ ಮಾರಾಟಗಾರರ ಕುರಿತಾಗಿ ಲಭ್ಯವಾಗಿದ್ದ ಸುಳಿವುಗಳ ಮೇಲೂ ಸೂಕ್ತ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿ ಅವರನ್ನು ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದೆ.
ಮೈಸೂರಿನಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ ಎರಡು ಬಾರಿ (ಮಹಾರಾಷ್ಟ್ರ ಪೊಲೀಸ್ ಮತ್ತು ದೆಹಲಿ ಎನ್‌ಸಿಬಿ) ಹೊರಗಿನ ಏಜೆನ್ಸಿಗಳು ಡ್ರಗ್ಸ್ ತಯಾರಿಕಾ ಘಟಕಗಳನ್ನು ಪತ್ತೆಹಚ್ಚಿದ್ದು, ಸ್ಥಳೀಯ ಪೊಲೀಸರಿಗೆ ದೊಡ್ಡ ಆಘಾತವಾಗಿದೆ. ಇದರಿಂದ ನಗರದಲ್ಲಿ ಡ್ರಗ್ ಮಾಫಿಯಾ ಹೆಚ್ಚಾಗುತ್ತಿರುವ ಆತಂಕ ವ್ಯಕ್ತವಾಗಿದೆ. ಕಮಿಷನರ್ ಅವರು ಈ ವೈಫಲ್ಯಕ್ಕೆ ಜವಾಬ್ದಾರಿಯನ್ನು ಒಪ್ಪಿಕೊಂಡು, ಸಿಸಿಬಿ ಸಿಬ್ಬಂದಿಗೆ ಎಚ್ಚರಿಕೆ ನೀಡಿ ಕಠಿಣ ಕ್ರಮಗಳನ್ನು ಘೋಷಿಸಿದ್ದಾರೆ.
ಇದೀಗ ನಗರದ ಔದ್ಯೋಗಿಕ ಪ್ರದೇಶಗಳಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದ್ದು, ಡ್ರಗ್ ಹಾವಳಿಯನ್ನು ಸಂಪೂರ್ಣ ನಿಯಂತ್ರಿಸುವ ಗುರಿಯನ್ನು ಹೊಂದಲಾಗಿದೆ. ಕಮಿಷನರ್ ಸೀಮಾ ಲಾಟ್ಕರ್ ಅವರು “ನಗರವನ್ನು ಡ್ರಗ್-ಮುಕ್ತಗೊಳಿಸುವಲ್ಲಿ ಯಾವುದೇ ರಾಜಿಯಿಲ್ಲ” ಎಂದು ಸ್ಪಷ್ಟ ಪಡಿಸಿದ್ದಾರೆ.
ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್…
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…