ಮೈಸೂರು ನಗರ

ಡ್ರಗ್ಸ್‌ ಹಾವಳಿ ನಿಯಂತ್ರಣದಲ್ಲಿ ಸಿಸಿಬಿ ವೈಫಲ್ಯ ; ಕಮಿಷನರ್ ಸೀಮಾ ಲಾಟ್ಕರ್ ಸಿಬ್ಬಂದಿಗೆ ಬಿಗ್ ಶಾಕ್!

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚಿಗೆ ಮಾದಕ ವಸ್ತುಗಳ (ಡ್ರಗ್ಸ್) ತಯಾರಿಕೆ ಮತ್ತು ಮಾರಾಟದ ಜಾಲಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರ ಸಿಸಿಬಿ (ಸೆಂಟ್ರಲ್ ಕ್ರೈಮ್ ಬ್ರಾಂಚ್) ಪೊಲೀಸರು ನಿಯಂತ್ರಣದಲ್ಲಿ ವೈಫಲ್ಯ ತೋರಿದ್ದಾರೆ. ಇದರಿಂದ ಆಕ್ರೋಶಗೊಂಡ ಮೈಸೂರು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಅವರು ಸಿಸಿಬಿ ಘಟಕಕ್ಕೆ ಗಂಭೀರ ಕ್ರಮ ಕೈಗೊಂಡಿದ್ದಾರೆ.

ಇತ್ತೀಚೆಗೆ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ತಯಾರಿಕಾ ಘಟಕ ಪತ್ತೆಯಾಗಿದ್ದು, ಇದನ್ನು ಕೇಂದ್ರ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಅಧಿಕಾರಿಗಳು ಭೇದಿಸಿದರು. ಈ ಘಟನೆಯ ನಂತರ ಸಿಸಿಬಿ ಪೊಲೀಸರ ನಿರ್ಲಕ್ಷ್ಯ ಮತ್ತು ಗುಪ್ತಚರ ವೈಫಲ್ಯ ಎದ್ದುಕಾಣುತ್ತಿದೆ. ಇದರ ಹಿನ್ನೆಲೆಯಲ್ಲಿ ಕಮಿಷನರ್ ಸೀಮಾ ಲಾಟ್ಕರ್ ಅವರು ಸಿಸಿಬಿ ಘಟಕದ 10 ಮಂದಿ ಸಿಬ್ಬಂದಿಯನ್ನು ವರ್ಗಾಯಿಸಿ, ಘಟಕಕ್ಕೆ ‘ಮೇಜರ್ ಸರ್ಜರಿ’ ನಡೆಸಿದ್ದಾರೆ.

ಸಾಕಷ್ಟು ವರ್ಷಗಳಿಂದ ಸಿಸಿಬಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾನ್ಸ್‌ಟೇಬಲ್ ಹಾಗೂ ಹೆಡ್‌ ಕಾನ್ಸ್‌ಟೇಬಲ್‌ಗಳನ್ನು ವರ್ಗಾವಣೆ ಮಾಡಲಾಗಿದೆ. ಅವರನ್ನು ಮೂಲ ಠಾಣೆಗಳಿಗೆ ಕಳುಹಿಸುವಂತೆ ಆದೇಶ ಹೊರಡಿಸಲಾಗಿದೆ. ಈ ಅಧಿಕಾರಿಗಳು ಮಾದಕ ವಸ್ತು ಮಾರಾಟ ಹಾಗೂ ಪೂರೈಕೆ ಜಾಲವನ್ನು ನಿಯಂತ್ರಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ, ಡ್ರಗ್ ಮಾರಾಟಗಾರರ ಕುರಿತಾಗಿ ಲಭ್ಯವಾಗಿದ್ದ ಸುಳಿವುಗಳ ಮೇಲೂ ಸೂಕ್ತ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿ ಅವರನ್ನು ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದೆ.

ಮೈಸೂರಿನಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ ಎರಡು ಬಾರಿ (ಮಹಾರಾಷ್ಟ್ರ ಪೊಲೀಸ್ ಮತ್ತು ದೆಹಲಿ ಎನ್‌ಸಿಬಿ) ಹೊರಗಿನ ಏಜೆನ್ಸಿಗಳು ಡ್ರಗ್ಸ್ ತಯಾರಿಕಾ ಘಟಕಗಳನ್ನು ಪತ್ತೆಹಚ್ಚಿದ್ದು, ಸ್ಥಳೀಯ ಪೊಲೀಸರಿಗೆ ದೊಡ್ಡ ಆಘಾತವಾಗಿದೆ. ಇದರಿಂದ ನಗರದಲ್ಲಿ ಡ್ರಗ್ ಮಾಫಿಯಾ ಹೆಚ್ಚಾಗುತ್ತಿರುವ ಆತಂಕ ವ್ಯಕ್ತವಾಗಿದೆ. ಕಮಿಷನರ್ ಅವರು ಈ ವೈಫಲ್ಯಕ್ಕೆ ಜವಾಬ್ದಾರಿಯನ್ನು ಒಪ್ಪಿಕೊಂಡು, ಸಿಸಿಬಿ ಸಿಬ್ಬಂದಿಗೆ ಎಚ್ಚರಿಕೆ ನೀಡಿ ಕಠಿಣ ಕ್ರಮಗಳನ್ನು ಘೋಷಿಸಿದ್ದಾರೆ.

ಇದೀಗ ನಗರದ ಔದ್ಯೋಗಿಕ ಪ್ರದೇಶಗಳಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದ್ದು, ಡ್ರಗ್ ಹಾವಳಿಯನ್ನು ಸಂಪೂರ್ಣ ನಿಯಂತ್ರಿಸುವ ಗುರಿಯನ್ನು ಹೊಂದಲಾಗಿದೆ. ಕಮಿಷನರ್ ಸೀಮಾ ಲಾಟ್ಕರ್ ಅವರು “ನಗರವನ್ನು ಡ್ರಗ್-ಮುಕ್ತಗೊಳಿಸುವಲ್ಲಿ ಯಾವುದೇ ರಾಜಿಯಿಲ್ಲ” ಎಂದು ಸ್ಪಷ್ಟ ಪಡಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

2 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

3 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

4 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

5 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

8 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

8 hours ago