Mysore
29
light rain

Social Media

ಶನಿವಾರ, 17 ಅಕ್ಟೋಬರ್ 2026
Light
Dark

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ.

ಇಡೀ ಬೆಟ್ಟವನ್ನು ವಿವಿಧ ಹೂಗಳಿಂದ ಅಲಂಕಾರ ಮಾಡಲಾಗಿದ್ದು, ಮುಂಜಾನೆಯಿಂದಲೇ ಚಾಮುಂಡಿ ತಾಯಿಗೆ ವಿಶೇಷ ಪೂಜೆ ನಡೆಯುತ್ತಿದೆ.

ತಾಯಿ ಚಾಮುಂಡೇಶ್ವರಿ ಮಹಾಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದು, ಉತ್ಸವ ಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಗಿದೆ.

ದೇವಿಯ ದರ್ಶನಕ್ಕೆ ಬೆಳಗಿನ ಜಾವದಿಂದಲೇ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

Tags:
error: Content is protected !!