Mysore
18
broken clouds

Social Media

ಮಂಗಳವಾರ, 11 ಫೆಬ್ರವರಿ 2025
Light
Dark

ಕೇಂದ್ರ ಬಜೆಟ್‌ ಬಗ್ಗೆ ಸಂಸದ ಯದುವೀರ್‌ ಒಡೆಯರ್‌ ಟ್ವೀಟ್‌

ಮೈಸೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಮಂಡಿಸಿದ ಬಜೆಟ್‌ ಬಗ್ಗೆ ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಬೆಳೆಗಳ ಉತ್ಪಾದಕತೆ ವೃದ್ಧಿಸುವ ಸಲುವಾಗಿ ಪ್ರಧಾನಮಂತ್ರಿ ಧನ-ಧಾನ್ಯ ಯೋಜನೆ ಆರಂಭಿಸಲಾಗುವುದು. ಈ ಯೋಜನೆ 1.7 ಕೋಟಿ ರೈತರಿಗೆ ಪ್ರಯೋಜನ ನೀಡಲಿದೆ. ರಾಜ್ಯ ಸರ್ಕಾರಗಳ ಪಾಲುದಾರಿಕೆಯೊಂದಿಗೆ ದೇಶದ 100 ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಇದರ ಜೊತೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಜನಪರ ಹಾಗೂ ವಿಕಸಿತ 2025ರ ಕೇಂದ್ರ ಬಜೆಟ್‌ನಲ್ಲಿ ಅಗತ್ಯ ವಸ್ತುಗಳ ಬೆಲೆ ಇಳಿಕೆಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

 

Tags: