Mysore
20
overcast clouds
Light
Dark

ಬಜೆಟ್‌ನಲ್ಲಿ ರಾಜ್ಯಕ್ಕೆ ಚೊಂಬು ಕೊಟ್ಟ ಬಿಜೆಪಿಯವರನ್ನು ಬೆಂಬಲಿಸಬೇಕೇ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಪ್ರಶ್ನೆ

ಮೈಸೂರು: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಖಾಲಿ ಚೊಂಬು ಹಾಗೂ ತೆಂಗಿನಕಾಯಿ ಚಿಪ್ಪು ನೀಡಿರುವ ಬಿಜೆಪಿಯನ್ನು ಬೆಂಬಲಿಸಬೇಕೇ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಪ್ರಶ್ನೆ ಮಾಡಿದ್ದಾರೆ.

ನಿನ್ನೆ ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್‌ನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದರು.

ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಅವರು, ಖಾಲಿ ಚೊಂಬುಗಳು ಹಾಗೂ ಮೂರು ನಾಮ ಬಳಿದ ತೆಂಗಿನ ಕಾಯಿ ಚಿಪ್ಪುಗಳನ್ನು ಮುಂದಿಟ್ಟುಕೊಂಡು ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ಕಿಡಿಕಾರಿದರು.

ಕೇಂದ್ರ ಸರ್ಕಾರ ರೈತರು, ಯುವಕರು, ಪರಿಶಿಷ್ಟರು ಹಾಗೂ ಅಲ್ಪಸಂಖ್ಯಾತರ ವಿರೋಧಿಯಾಗಿದೆ. ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ತುಂಬಾ ಅನ್ಯಾಯ ಆಗಿದೆ ಎಂದು ಕಿಡಿಕಾರಿದರು.

ರಾಜ್ಯದ ಬೇಡಿಕೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ಪ್ರಧಾನಿ ನರೇಂದ್ರ ಮೋದಿಗೆ ಮನವರಿಕೆ ಮಾಡಿದ್ದರು. ಆದರೂ ಬಜೆಟ್‌ನಲ್ಲಿ ನಮ್ಮ ರಾಜ್ಯಕ್ಕೆ ಏನೂ ಸಿಕ್ಕಿಲ್ಲ. ಇಲ್ಲಿಂದ ಆಯ್ಕೆಯಾಗಿ ಹೋಗಿರುವ ಬಿಜೆಪಿ-ಜೆಡಿಎಸ್‌ ಸಂಸದರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದರು.

ಈ ಬಾರಿಯ ಕೇಂದ್ರ ಬಜೆಟ್‌ ಮೋದಿ ಅವರು ಅಧಿಕಾರ ಉಳಿಸಿಕೊಳ್ಳಲು ಮಂಡಿಸಿರುವ ಕುರ್ಚಿ ಬಚಾವೋ ಬಜೆಟ್‌ ಇದಾಗಿದೆ ಎಂದು ಟೀಕೆ ಮಾಡಿದರು.