ಮೈಸೂರು ನಗರ

ಬಜೆಟ್‌ನಲ್ಲಿ ರಾಜ್ಯಕ್ಕೆ ಚೊಂಬು ಕೊಟ್ಟ ಬಿಜೆಪಿಯವರನ್ನು ಬೆಂಬಲಿಸಬೇಕೇ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಪ್ರಶ್ನೆ

ಮೈಸೂರು: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಖಾಲಿ ಚೊಂಬು ಹಾಗೂ ತೆಂಗಿನಕಾಯಿ ಚಿಪ್ಪು ನೀಡಿರುವ ಬಿಜೆಪಿಯನ್ನು ಬೆಂಬಲಿಸಬೇಕೇ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಪ್ರಶ್ನೆ ಮಾಡಿದ್ದಾರೆ.

ನಿನ್ನೆ ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್‌ನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದರು.

ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಅವರು, ಖಾಲಿ ಚೊಂಬುಗಳು ಹಾಗೂ ಮೂರು ನಾಮ ಬಳಿದ ತೆಂಗಿನ ಕಾಯಿ ಚಿಪ್ಪುಗಳನ್ನು ಮುಂದಿಟ್ಟುಕೊಂಡು ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ಕಿಡಿಕಾರಿದರು.

ಕೇಂದ್ರ ಸರ್ಕಾರ ರೈತರು, ಯುವಕರು, ಪರಿಶಿಷ್ಟರು ಹಾಗೂ ಅಲ್ಪಸಂಖ್ಯಾತರ ವಿರೋಧಿಯಾಗಿದೆ. ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ತುಂಬಾ ಅನ್ಯಾಯ ಆಗಿದೆ ಎಂದು ಕಿಡಿಕಾರಿದರು.

ರಾಜ್ಯದ ಬೇಡಿಕೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ಪ್ರಧಾನಿ ನರೇಂದ್ರ ಮೋದಿಗೆ ಮನವರಿಕೆ ಮಾಡಿದ್ದರು. ಆದರೂ ಬಜೆಟ್‌ನಲ್ಲಿ ನಮ್ಮ ರಾಜ್ಯಕ್ಕೆ ಏನೂ ಸಿಕ್ಕಿಲ್ಲ. ಇಲ್ಲಿಂದ ಆಯ್ಕೆಯಾಗಿ ಹೋಗಿರುವ ಬಿಜೆಪಿ-ಜೆಡಿಎಸ್‌ ಸಂಸದರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದರು.

ಈ ಬಾರಿಯ ಕೇಂದ್ರ ಬಜೆಟ್‌ ಮೋದಿ ಅವರು ಅಧಿಕಾರ ಉಳಿಸಿಕೊಳ್ಳಲು ಮಂಡಿಸಿರುವ ಕುರ್ಚಿ ಬಚಾವೋ ಬಜೆಟ್‌ ಇದಾಗಿದೆ ಎಂದು ಟೀಕೆ ಮಾಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27)…

2 hours ago

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

2 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

3 hours ago

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…

3 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

4 hours ago

ಪೆಟ್ರೋಲ್‌,ಡೀಸೆಲ್‌ ಬೆಲೆ ಏರಿಕೆ ಆತಂಕದ ನಡುವೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…

4 hours ago