ಮೈಸೂರು: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಖಾಲಿ ಚೊಂಬು ಹಾಗೂ ತೆಂಗಿನಕಾಯಿ ಚಿಪ್ಪು ನೀಡಿರುವ ಬಿಜೆಪಿಯನ್ನು ಬೆಂಬಲಿಸಬೇಕೇ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಪ್ರಶ್ನೆ ಮಾಡಿದ್ದಾರೆ.
ನಿನ್ನೆ ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್‌ನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದರು.
ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು, ಖಾಲಿ ಚೊಂಬುಗಳು ಹಾಗೂ ಮೂರು ನಾಮ ಬಳಿದ ತೆಂಗಿನ ಕಾಯಿ ಚಿಪ್ಪುಗಳನ್ನು ಮುಂದಿಟ್ಟುಕೊಂಡು ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ಕಿಡಿಕಾರಿದರು.
ಕೇಂದ್ರ ಸರ್ಕಾರ ರೈತರು, ಯುವಕರು, ಪರಿಶಿಷ್ಟರು ಹಾಗೂ ಅಲ್ಪಸಂಖ್ಯಾತರ ವಿರೋಧಿಯಾಗಿದೆ. ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ತುಂಬಾ ಅನ್ಯಾಯ ಆಗಿದೆ ಎಂದು ಕಿಡಿಕಾರಿದರು.
ರಾಜ್ಯದ ಬೇಡಿಕೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ಪ್ರಧಾನಿ ನರೇಂದ್ರ ಮೋದಿಗೆ ಮನವರಿಕೆ ಮಾಡಿದ್ದರು. ಆದರೂ ಬಜೆಟ್‌ನಲ್ಲಿ ನಮ್ಮ ರಾಜ್ಯಕ್ಕೆ ಏನೂ ಸಿಕ್ಕಿಲ್ಲ. ಇಲ್ಲಿಂದ ಆಯ್ಕೆಯಾಗಿ ಹೋಗಿರುವ ಬಿಜೆಪಿ-ಜೆಡಿಎಸ್ ಸಂಸದರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದರು.
ಈ ಬಾರಿಯ ಕೇಂದ್ರ ಬಜೆಟ್ ಮೋದಿ ಅವರು ಅಧಿಕಾರ ಉಳಿಸಿಕೊಳ್ಳಲು ಮಂಡಿಸಿರುವ ಕುರ್ಚಿ ಬಚಾವೋ ಬಜೆಟ್ ಇದಾಗಿದೆ ಎಂದು ಟೀಕೆ ಮಾಡಿದರು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…