ಮೈಸೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಗ್ಗೆ ರೈತ ಮುಖಂಡ ಕುರುಬೂರು ಶಾಂತಕುಮಾರ್ ಕಿಡಿಕಾರಿದ್ದು, ಕೃಷಿ ಸಮಸ್ಯೆಗಳಿಗೆ ಪೂರಕವಲ್ಲದ, ರೈತರ ಮೂಗಿಗೆ ತುಪ್ಪ ಸವರುವ ಬಜೆಟ್ ಆಗಿದೆ ಎಂದು ಕಿಡಿಕಾರಿದ್ದಾರೆ.
ಕೇಂದ್ರ ಬಜೆಟ್ ಮಂಡನೆಯಾಗಿರುವ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು, ಕೇಂದ್ರ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಅನುದಾನ ಹೆಚ್ಚಳ ಮಾಡಿದ್ದರೂ, ರೈತರ ನೈಜ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ದಿಕ್ಕಿನಲ್ಲಿ ಕಾರ್ಯಯೋಜನೆ ರೂಪಿಸಿಲ್ಲ.
ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಖಾತ್ರಿ ಮಾಡುವ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪವನ್ನೇ ಮಾಡಿಲ್ಲ. ಕೃಷಿ ಕ್ಷೇತ್ರ ಶ್ರಮಿಕರ ಕ್ಷೇತ್ರವಾಗಿದೆ. ಡಿಜಿಟಲೀಕರಣ ಯಾವತ್ತೂ ಆಹಾರ ಉತ್ಪಾದನೆ ಮಾಡುವುದಿಲ್ಲ ಎಂಬುದನ್ನು ಕೇಂದ್ರ ಸರ್ಕಾರ ಮರೆತು ಹೋಗಿದೆ ಎಂದು ಕಿಡಿಕಾರಿದರು.
ಬಜೆಟ್‌ನಲ್ಲಿ ರೈತರಿಗೆ ಸಾಲ ನೀಡುವ ನೀತಿಯೂ ಜಾರಿಯಾಗಿಲ್ಲ. ಕರ್ನಾಟಕದಿಂದ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರು, ರಾಜ್ಯಕ್ಕೆ ಬಜೆಟ್‌ನಲ್ಲಿ ಅನ್ಯಾಯ ಮಾಡಿದ್ದಾರೆ. ನಮಗೆ ಇನ್ನೂ ಹೆಚ್ಚಿನ ಕೊಡುಗೆಗಳ ನಿರೀಕ್ಷೆ ಇತ್ತು. ರಾಜಕೀಯಕ್ಕೋಸ್ಕರ ಬಜೆಟ್‌ನಲ್ಲಿ ರೈತರಿಗೆ ಅನ್ಯಾಯ ಮಾಡಲಾಗಿದೆ. ಇದು ಸರಿಯಾದ ಬೆಳವಣಿಗೆಯಲ್ಲ ಎಂದು ಆರೋಪಿಸಿದರು.
ಇನ್ನೂ ಮುಂದುವರಿದು ಮಾತನಾಡಿದ ಕುರುಬೂರು ಶಾಂತಕುಮಾರ್ ಅವರು, ಕೇಂದ್ರ ಬಜೆಟ್‌ನಲ್ಲಿ ನಮ್ಮ ರಾಜ್ಯಕ್ಕೆ ಅನ್ಯಾಯವಾಗಿರುವ ಬಗ್ಗೆ ಇಲ್ಲಿಂದ ಆಯ್ಕೆಯಾಗಿರುವ ಸಂಸದರು ಧನಿ ಎತ್ತಬೇಕು ಎಂದು ಮನವಿ ಮಾಡಿದರು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…