Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಅಕ್ಕಿ ರಫ್ತಿಗೆ ಕೇಂದ್ರ ಸರ್ಕಾರ ನಿಷೇಧ: ರೈತ ಮುಖಂಡ ಕುರುಬೂರು ಶಾಂತಕುಮಾರ್‌ ಕಿಡಿ

ಮೈಸೂರು: ಅಕ್ಕಿ ರಫ್ತಿಗೆ ನಿಷೇಧ ಹೇರಿರುವ ಕೇಂದ್ರ ಸರ್ಕಾರದ ನಿಲುವಿಗೆ ರೈತ ಮುಖಂಡ ಕುರುಬೂರು ಶಾಂತಕುಮಾರ್‌ ಕಿಡಿಕಾರಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಆಕ್ರೋಶ ಹೊರಹಾಕಿದ ಅವರು, ಕೇಂದ್ರ ಸರ್ಕಾರವು ಅಕ್ಕಿ ರಫ್ತು ನಿಷೇಧಿಸಿರುವುದನ್ನು ವಾಪಸ್‌ ಪಡೆಯಬೇಕು. ಇಲ್ಲದಿದ್ದರೆ ಆಂಧ್ರ, ತೆಲಂಗಾಣ, ತಮಿಳುನಾಡು ಹಾಗೂ ಕರ್ನಾಟಕ ರಾಜ್ಯಗಳ ಭತ್ತ ಬೆಳೆಗಾರರಿಗೆ ಭತ್ತದ ಬೆಲೆ ಕುಸಿತವಾಗುವ ಆತಂಕ ಎದುರಾಗಲಿದೆ. ಈ ಬಗ್ಗೆ ಜುಲೈ.22ರಂದು ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತೇವೆ ಎಂದರು.

ಇನ್ನೂ ಜುಲೈ.21ರಂದು ಚಿಕ್ಕಬಳ್ಳಾಪುರದಲ್ಲಿ ರೈತರ ಹಿತಕ್ಕಾಗಿ ಹೋರಾಡಿ ಪ್ರಾಣ ಕಳೆದುಕೊಂಡ ರೈತರ ನೆನೆಪಿಗಾಗಿ ರೈತ ಹುತಾತ್ಮ ದಿನ ರಾಜ್ಯಮಟ್ಟದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದ ಎಲ್ಲಾ ರೈತ ಸಂಘಟನೆಗಳ ಮುಖಂಡರು ಇದರಲ್ಲಿ ಭಾಗಿಯಾಗುತ್ತಾರೆ ಎಂದು ಮಾಹಿತಿ ನೀಡಿದರು.

ಇನ್ನೂ ದೆಹಲಿ ರೈತ ಹೋರಾಟದ ಮುಂದಿನ ಯೋಜನೆ ಬಗ್ಗೆ ಜುಲೈ.22ರಂದು ನವದೆಹಲಿಯಲ್ಲಿ ಸಂಯುಕ್ತ ಕಿಸಾನ್‌ ಮೋರ್ಚಾ ಸಂಘಟನೆಯಿಂದ ರಾಷ್ಟ್ರೀಯ ರೈತ ಮುಖಂಡರ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದರು.

ಇನ್ನೂ ಮುಂದುವರಿದು ಮಾತನಾಡಿದ ಅವರು, ಬಣ್ಣಾರಿ ಅಮ್ಮನ್‌ ಸಕ್ಕರೆ ಕಾರ್ಖಾನೆಯು ರೈತರನ್ನು ವಂಚಿಸುತ್ತಿದೆ. ಈ ಬಗ್ಗೆ ಕಬ್ಬು ಬೆಳೆಗಾರರಿಗೆ ಜಾಗೃತಿ ಮೂಡಿಸಬೇಕು. ಹಾಗಾಗಿ ಜುಲೈ.18ರಂದು ಬಣ್ಣಾರಿ ಕಾರ್ಖಾನೆ ಹೋರಾಟ ಹಮ್ಮಿಕೊಂಡಿದ್ದೇವೆ ಎಂದರು.

 

 

Tags: