ಮೈಸೂರು: ಅಕ್ಕಿ ರಫ್ತಿಗೆ ನಿಷೇಧ ಹೇರಿರುವ ಕೇಂದ್ರ ಸರ್ಕಾರದ ನಿಲುವಿಗೆ ರೈತ ಮುಖಂಡ ಕುರುಬೂರು ಶಾಂತಕುಮಾರ್ ಕಿಡಿಕಾರಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಆಕ್ರೋಶ ಹೊರಹಾಕಿದ ಅವರು, ಕೇಂದ್ರ ಸರ್ಕಾರವು ಅಕ್ಕಿ ರಫ್ತು ನಿಷೇಧಿಸಿರುವುದನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಆಂಧ್ರ, ತೆಲಂಗಾಣ, ತಮಿಳುನಾಡು ಹಾಗೂ ಕರ್ನಾಟಕ ರಾಜ್ಯಗಳ ಭತ್ತ ಬೆಳೆಗಾರರಿಗೆ ಭತ್ತದ ಬೆಲೆ ಕುಸಿತವಾಗುವ ಆತಂಕ ಎದುರಾಗಲಿದೆ. ಈ ಬಗ್ಗೆ ಜುಲೈ.22ರಂದು ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತೇವೆ ಎಂದರು.
ಇನ್ನೂ ಜುಲೈ.21ರಂದು ಚಿಕ್ಕಬಳ್ಳಾಪುರದಲ್ಲಿ ರೈತರ ಹಿತಕ್ಕಾಗಿ ಹೋರಾಡಿ ಪ್ರಾಣ ಕಳೆದುಕೊಂಡ ರೈತರ ನೆನೆಪಿಗಾಗಿ ರೈತ ಹುತಾತ್ಮ ದಿನ ರಾಜ್ಯಮಟ್ಟದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದ ಎಲ್ಲಾ ರೈತ ಸಂಘಟನೆಗಳ ಮುಖಂಡರು ಇದರಲ್ಲಿ ಭಾಗಿಯಾಗುತ್ತಾರೆ ಎಂದು ಮಾಹಿತಿ ನೀಡಿದರು.
ಇನ್ನೂ ದೆಹಲಿ ರೈತ ಹೋರಾಟದ ಮುಂದಿನ ಯೋಜನೆ ಬಗ್ಗೆ ಜುಲೈ.22ರಂದು ನವದೆಹಲಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯಿಂದ ರಾಷ್ಟ್ರೀಯ ರೈತ ಮುಖಂಡರ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದರು.
ಇನ್ನೂ ಮುಂದುವರಿದು ಮಾತನಾಡಿದ ಅವರು, ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯು ರೈತರನ್ನು ವಂಚಿಸುತ್ತಿದೆ. ಈ ಬಗ್ಗೆ ಕಬ್ಬು ಬೆಳೆಗಾರರಿಗೆ ಜಾಗೃತಿ ಮೂಡಿಸಬೇಕು. ಹಾಗಾಗಿ ಜುಲೈ.18ರಂದು ಬಣ್ಣಾರಿ ಕಾರ್ಖಾನೆ ಹೋರಾಟ ಹಮ್ಮಿಕೊಂಡಿದ್ದೇವೆ ಎಂದರು.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…