ಮೈಸೂರು ನಗರ

ಕೇಂದ್ರ ತನಿಖಾ ಸಂಸ್ಥೆಗಳು ಸ್ವತಂತ್ರವಾಗಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕೇಂದ್ರ ತನಿಖಾ ಸಂಸ್ಥೆಗಳು ಇತ್ತೀಚಿನ ವರ್ಷಗಳಲ್ಲಿ ತಮ್ಮ ಸ್ವತಂತ್ರತೆಯನ್ನು ಕಳೆದುಕೊಂಡಿವೆ. ಬಿಜೆಪಿ ತಾಳಕ್ಕೆ ತಕ್ಕಂತೆ ಈ ಸಂಸ್ಥೆಗಳು ಕುಣಿಯುತ್ತಿವೆ ಎಂದು ವಿಧಾನಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಬೇಕು ಎಂದು ಕೇಂದ್ರ ಬಿಜೆಪಿ ಮತ್ತು ರಾಜ್ಯ ಬಿಜೆಪಿಯಿಂದ ಜಾರಿ ನಿರ್ದೇಶನಾಲಯಕ್ಕೆ ಒತ್ತಡ ಇದೆ. ಆದ ಕಾರಣ ದುರುದ್ದೇಶದಿಂದ ಸಿಎಂ ಸಿದ್ದರಾಮಯ್ಯ ಅವರ ಹೆಸರು ಬಳಸುತ್ತಿದ್ದಾರೆ ಎಂದು ಹೇಳಿದರು.

ಮುಡಾ (MUDA)ದವರು ನಮ್ಮ ಜಮೀನು ವಶಪಡಿಸಿಕೊಂಡಿರುವುದಕ್ಕೆ ಪೂರಕವಾಗಿ ನಮಗೆ ಬದಲಿ ನಿವೇಶನ ನೀಡಿದ್ದಾರೆ. ಮುಡಾದಲ್ಲಿ ಆಗಿರುವ ಭ್ರಷ್ಟಾಚಾರಕ್ಕೂ ನಮ್ಮ 14 ನಿವೇಶನಗಳಿಗೂ ಯಾವುದೇ ಸಂಬಂಧವಿಲ್ಲ. ನಮಗೆ ನೀಡಿರುವ ಸೈಟು ಕಾನೂನಾತ್ಮಕವಾಗಿದೆ. ಇದು ಇಡಿಯವರಿಗೂ ಗೊತ್ತು. ಆದರೆ ಸಿದ್ದರಾಮಯ್ಯ ಅವರನ್ನು ಹೇಗಾದರೂ ಆರೋಪಿ ಸ್ಥಾನದಲ್ಲಿ ನಿಲ್ಲಿಸಬೇಕು ಎಂದು ಬಿಜೆಪಿಯಿಂದ ಒತ್ತಡ ಇರುವುದರಿಂದ ತನಿಖಾ ಸಂಸ್ಥೆಗಳು ಈ ರೀತಿ ನಡೆದುಕೊಳ್ಳುತ್ತಿವೆ ಎಂದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಯತೀಂದ್ರ, ಅದು ದೊಡ್ಡ ನಾಯಕರಿಗೆ ಬಿಟ್ಟಿದ್ದು. ಆ ಸ್ಥಾನದ ಬಗ್ಗೆ ಮಾತನಾಡಲು ನಾನು ಇನ್ನು ಚಿಕ್ಕವನು. ಸಿದ್ದರಾಮಯ್ಯ ಅವರೆ ಐದು ವರ್ಷ ಪೂರ್ಣ ಅವಧಿಗೆ ಸಿಎಂ ಆಗಿರುತ್ತಾರೆ. ಹೈಕಮಾಂಡ್‌ ಮತ್ತು ಅಧ್ಯಕ್ಷರು ಸೇರಿದಂತೆ ಎಲ್ಲರೂ ಸಿದ್ದರಾಮಯ್ಯ ಅವರ ಪರವಾಗಿದ್ದಾರೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

4 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

4 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

4 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

4 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

4 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

4 hours ago