ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದರ್ಶನ ಪಡೆದರು.
ಮೈಸೂರಿನಲ್ಲಿ ನಿನ್ನೆ ತಾನೇ ದಿಶಾ ಸಭೆ ನಡೆಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಇಂದು ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ನಾಡಿಗೆ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ದೇವಿಯ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ಜನರನ್ನು ಕಂಡು ಎಚ್.ಡಿ.ಕುಮಾರಸ್ವಾಮಿ ಅವರು ನಗುಮುಖದಿಂದಲೇ ಮಾತನಾಡಿಸಿದರು. ಈ ವೇಳೆ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಸಾಥ್ ನೀಡಿದರು.





