ಮೈಸೂರು ನಗರ

ಮೈಸೂರು| ಹಣಕಾಸಿನ ಕೊರತೆಯಿಂದ ರಾಜ್ಯ ದಿವಾಳಿಯಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪ್ರಶಾಂತ್‌ ಎನ್‌ ಮಲ್ಲಿಕ್‌

ಮೈಸೂರು: ಹಣಕಾಸಿನ ಕೊರತೆಯಿಂದ ರಾಜ್ಯ ಸಂಪೂರ್ಣ ದಿವಾಳಿಯತ್ತ ಸಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಒಂದಲ್ಲಾ ಒಂದು ಹಗರಣಗಳು ನಡೆಯುತ್ತಲೇ ಇವೆ. ಇದನ್ನು ಖಂಡಿಸಿ ಇಂದಿನಿಂದ ಮೇ.3ರವರೆಗೂ ನಮ್ಮ ಹೋರಾಟ ನಡೆಯಲಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಇನ್ನು ರಾಜ್ಯ ಸರ್ಕಾರದಿಂದ ಮುಸ್ಲಿಂಮರ ತುಷ್ಟಿಕರಣವಾಗುತ್ತಿದೆ. ಗುತ್ತಿಗೆಯಲ್ಲಿ 4% ಮೀಸಲಾತಿ ನೀಡಿರುವುದರ ಬಗ್ಗೆ ನಾವು ನ್ಯಾಯಾಲಯದ ಮೊರೆ ಹೋಗುತ್ತೇವೆ. ಧರ್ಮಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ. ರಾಜ್ಯದ ಸರ್ಕಾರಿ ನೌಕರರಿಗೆ ಸಂಬಳ ಕೊಡಲಾಗುತ್ತಿಲ್ಲ. ಹಣಕಾಸಿನ ಕೊರತೆಯಿಂದ ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಜನಸಾಮಾನ್ಯರ ಬದುಕು ಶೋಚನೀಯ ಸ್ಥಿತಿಗೆ ತಲುಪಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

ಆಂದೋಲನ ಡೆಸ್ಕ್

Recent Posts

ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಇಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…

8 mins ago

ಪೆಟ್ರೋಲ್‌ ಖಾಲಿ ವದಂತಿ: ಬಂಕ್‌ಗಳಿಗೆ ಮುಗಿಬಿದ್ದ ಜನತೆ

ಚಾಮರಾಜನಗರ: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್‌ ಮೀಡಿಯಾದಲ್ಲಿ ಪೆಟ್ರೋಲ್‌, ಡೀಸೆಲ್‌…

25 mins ago

ನಂಜನಗೂಡು| ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ

ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ…

33 mins ago

ಇರಾನ್‌ ಜೊತೆ ಕದನ ವಿರಾಮ ಇಲ್ಲ: ಡೊನಾಲ್ಡ್‌ ಟ್ರಂಪ್‌ ಸ್ಪಷ್ಟನೆ

ವಾಷಿಂಗ್ಟನ್:‌ ಇರಾನ್‌ ಜೊತೆ ಕದನ ವಿರಾಮ್‌ ಮಾಡಿಕೊಳ್ಳಲು ಬಯಸಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. NATO ಮಿತ್ರರಾಷ್ಟ್ರಗಳನ್ನು…

1 hour ago

ಓದುಗರ ಪತ್ರ: ನಗುಮೊಗದ ಮೌನ ಸಾಧಕ!

ದಣಿವರಿಯದೆ ದುಡಿದಿರಿ ಆರೋಗ್ಯ ಶಿಕ್ಷಣ ಕ್ಷೇತ್ರಗಳಲಿ ಉಸಿರಾಗಿತ್ತು ನಿಮಗೆ ಸಮಾಜಸೇವೆ! ಧಿಕ್ಕರಿಸಿದಿರಿ ಮೌಢ್ಯಕಂದಾಚಾರಗಳ ಪ್ರೀತಿಸಿದಿರಿ ಎಲ್ಲರನೂ ಸಮಭಾವದಲಿ! ಮನಮಾಗಿದ ನಗುಮೊಗದ…

2 hours ago

ಓದುಗರ ಪತ್ರ: ಮಂಗನ ಕೈಗೆ ……….

ನಾರ್ತ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ ( ನಾಟೋ) ದೇಶಗಳ ಗುಂಪಿಗೆ ಸೇರಿದ ಕೆನಡಾ, ಆಸ್ಟ್ರೇಲಿಯಾ, ಬ್ರಿಟನ್ ಮುಂತಾದ ದೇಶಗಳು ಇರಾನಿನ…

2 hours ago