ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಅಕ್ಟೋಬರ್ 24 ಮತ್ತು 25ರಂದು ಆನ್‌ಲೈನ್ ಸೇವೆಗಳು ಲಭ್ಯವಿರುವುದಿಲ್ಲ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.
ನಿಗದಿತ ದಿನಾಂಕಗಳಂದು ಸರ್ವರ್ ನಿರ್ವಹಣೆ ಇರುವುದರಿಂದ ಅಕ್ಟೋಬರ್ 24ರ ರಾತ್ರಿ 8 ಗಂಟೆಯಿಂದ ಅಕ್ಟೋಬರ್ 25ರ ಮಧ್ಯಾಹ್ನ1 ಗಂಟೆಯವರೆಗೆ ಸೆಸ್ಕ್‌ನ ಆನ್ ಲೈನ್ ಸೇವೆಗಳಾದ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದಂತೆ ಇನ್ನಿತರ ಆನ್ ಲೈನ್ ಆಧಾರಿತ ಸೇವೆಗಳು ಲಭ್ಯವಿರುವುದಿಲ್ಲ.
ಇದನ್ನು ಓದಿ: ಧಾರಾಕಾರ ಮಳೆಗೆ ಗೋಡೆ ಕುಸಿತ
ಪ್ರಮುಖವಾಗಿ ಸೆಸ್ಕ್ ವ್ಯಾಪ್ತಿಯ ಪ್ರದೇಶಗಳಾದ ಮೈಸೂರು, ನಂಜನಗೂಡು, ಹುಣಸೂರು, ಕೆ.ಆರ್. ನಗರ, ಮಂಡ್ಯ, ಮಳವಳ್ಳಿ, ಚಾಮರಾಜನಗರ, ಕೊಳ್ಳೇಗಾಲ, ಹಾಸನ, ಅರಸೀಕೆರೆ, ಚನ್ನರಾಯಪಟ್ಟಣ ಹಾಗೂ ಮಡಿಕೇರಿ ವ್ಯಾಪ್ತಿಯ ಗ್ರಾಹಕರಿಗೆ ಆನ್ ಲೈನ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಗ್ರಾಹಕರು ಸಹಕರಿಸುವಂತೆ ಸೆಸ್ಕ್ ಪ್ರಕಟಣೆಯಲ್ಲಿ ಕೋರಿದೆ.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…