ಮೈಸೂರು ನಗರ

ಅ.24 ಮತ್ತು 25ರಂದು ಸೆಸ್ಕ್ ಆನ್‌ಲೈನ್‌ ಸೇವೆಗಳು ಅಲಭ್ಯ

ಮೈಸೂರು : ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌)ದ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಅಕ್ಟೋಬರ್‌ 24 ಮತ್ತು 25ರಂದು ಆನ್‌ಲೈನ್‌ ಸೇವೆಗಳು ಲಭ್ಯವಿರುವುದಿಲ್ಲ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.

ನಿಗದಿತ ದಿನಾಂಕಗಳಂದು ಸರ್ವರ್‌ ನಿರ್ವಹಣೆ ಇರುವುದರಿಂದ ಅಕ್ಟೋಬರ್ 24ರ ರಾತ್ರಿ 8 ಗಂಟೆಯಿಂದ ಅಕ್ಟೋಬರ್ 25ರ ಮಧ್ಯಾಹ್ನ1 ಗಂಟೆಯವರೆಗೆ ಸೆಸ್ಕ್‌ನ ಆನ್‌ ಲೈನ್‌ ಸೇವೆಗಳಾದ ವಿದ್ಯುತ್‌ ಬಿಲ್‌ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದಂತೆ ಇನ್ನಿತರ ಆನ್‌ ಲೈನ್‌ ಆಧಾರಿತ ಸೇವೆಗಳು ಲಭ್ಯವಿರುವುದಿಲ್ಲ.

ಇದನ್ನು ಓದಿ: ಧಾರಾಕಾರ ಮಳೆಗೆ ಗೋಡೆ ಕುಸಿತ 

ಪ್ರಮುಖವಾಗಿ ಸೆಸ್ಕ್ ವ್ಯಾಪ್ತಿಯ ಪ್ರದೇಶಗಳಾದ ಮೈಸೂರು, ನಂಜನಗೂಡು, ಹುಣಸೂರು, ಕೆ.ಆರ್. ನಗರ, ಮಂಡ್ಯ, ಮಳವಳ್ಳಿ, ಚಾಮರಾಜನಗರ, ಕೊಳ್ಳೇಗಾಲ, ಹಾಸನ, ಅರಸೀಕೆರೆ, ಚನ್ನರಾಯಪಟ್ಟಣ ಹಾಗೂ ಮಡಿಕೇರಿ ವ್ಯಾಪ್ತಿಯ ಗ್ರಾಹಕರಿಗೆ ಆನ್‌ ಲೈನ್‌ ಸೇವೆಗಳಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಗ್ರಾಹಕರು ಸಹಕರಿಸುವಂತೆ ಸೆಸ್ಕ್ ಪ್ರಕಟಣೆಯಲ್ಲಿ ಕೋರಿದೆ.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

3 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

3 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

4 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

4 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

9 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

9 hours ago