ಮೈಸೂರು ನಗರ

ಮೈಸೂರು| ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ತೆಗೆಸಿದ ಪ್ರಕರಣ ಖಂಡಿಸಿ ಬೃಹತ್‌ ಪ್ರತಿಭಟನೆ

ಮೈಸೂರು: ಸಿಇಟಿ ಪರೀಕ್ಷಾ ಕೇಂದ್ರದಲ್ಲಿ (CET Examination Center) ಜನಿವಾರ ತೆಗೆಸಿದ ಪ್ರಕರಣವನ್ನು ಖಂಡಿಸಿ ಮೈಸೂರಿನಲ್ಲಿಂದು (Mysuru) ಜಿಲ್ಲಾ ಬ್ರಾಹ್ಮಣ ವೇದಿಕೆ ವತಿಯಿಂದ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ಕಟ್‌ ಮಾಡಿ ಬಿಸಾಕಿದ ಪ್ರಕರಣ ಇದೀಗ ಭಾರೀ ಸದ್ದು ಮಾಡುತ್ತಿದ್ದು, ಪ್ರಕರಣ ಖಂಡಿಸಿ ಬ್ರಾಹ್ಮಣ ವೇದಿಕೆ ಎಲ್ಲೆಡೆ ಪ್ರತಿಭಟನೆ ನಡೆಸುತ್ತಿದೆ.

ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲೂ ಜಿಲ್ಲಾ ಬ್ರಾಹ್ಮಣ ವೇದಿಕೆ ವತಿಯಿಂದ ಬೃಹತ್‌ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಮೈಸೂರಿನ ಅಗ್ರಹಾರ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆಯಲ್ಲಿ, ಪರೀಕ್ಷಾ ಸಿಬ್ಬಂದಿಗಳ ವಿರುದ್ಧ ಪ್ರತಿಭಟನಾಕಾರರು ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:- ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್:‌ ಕೂದಲೆಳೆ ಅಂತರದಲ್ಲಿ ಪಾರು

ಈ ವೇಳೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, ನಮಗೆ ಜನಿವಾರ ಅತ್ಯಂತ ಮಹತ್ವ ಮೌಲ್ಯವಾದದ್ದು. ಈ ಮೂಲಕ ನಮ್ಮ ಸಂಪ್ರದಾಯ, ಸಂಸ್ಕೃತಿಯನ್ನು ಕಾಪಾಡಿಕೊಂಡು ಬರುತ್ತಿದ್ದೇವೆ. ಜನಗಣತಿಯಲ್ಲಿ ಬ್ರಾಹ್ಮಣರನ್ನು ಕೇವಲ 16% ಇದ್ದಾರೆ ಎಂದು ತೋರಿಸಿದ್ದಾರೆ. ಜನಿವಾರದ ವಿಚಾರದಲ್ಲಿ ಸರ್ಕಾರ ಕ್ಷಮೆಯನ್ನು ಕೂಡ ಯಾಚಿಸಿಲ್ಲ. ಕೇವಲ ವಿಷಾದಿಸಿದೆ ಅಷ್ಟೇ. ಜನಿವಾರ ತೆಗೆಸಿ ಅಪಮಾನ ಮಾಡಿದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷೆ ನಡೆಸಬೇಕು. ಇದು ಸಾಧ್ಯವಾಗದಿದ್ದಲ್ಲಿ ಅಂಕ ನೀಡಿ ಸರ್ಕಾರಿ ಕಾಲೇಜಿನಲ್ಲಿ ಸೀಟ್ ನೀಡಬೇಕು ಎಂದು ಆಗ್ರಹಿಸಿದರು.

ಬಳಿಕ ಕೃಷ್ಣರಾಜ ಪೊಲೀಸ್‌ ಠಾಣೆಗೆ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಾಕಾರರು, ಜನಿವಾರ ತೆಗೆಸಿದ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

3 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

3 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

3 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

3 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

3 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

3 hours ago