ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ಕಾನೂನಾತ್ಮಕವಾಗಿ ಮಾಡುತ್ತಿದ್ದೇನೆ. ಯಾರದ್ದೋ ಹೇಳಿಕೆ ಆಧರಿಸಿ ಸಭೆ ಮಾಡಲು ಆಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರಿಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದಾರೆ.
ಸಭೆಗೂ ಮುನ್ನ ಚಾಮುಂಡಿಬೆಟ್ಟಕ್ಕೆ ತೆರಳಿ ನಾಡ ದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿಗೆ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಿದರು.
ಈ ಸಭೆಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ಕಾನೂನಾತ್ಮಕವಾಗಿಯೇ ಮಾಡುತ್ತಿದ್ದೇನೆ. ಯಾರದ್ದೋ ಹೇಳಿಕೆ ಆಧರಿಸಿ ಸಭೆ ಮಾಡಲು ಆಗಲ್ಲ. ಸಭೆ ಮುಂದೂಡಲು ಸಾಧ್ಯವೇ ಇಲ್ಲ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಯದುವೀರ್ ಒಡೆಯರ್ ಹೇಳಿಕೆ ಮುಖ್ಯವಲ್ಲ. ನಾನೂ ಕಾನೂನು ಪ್ರಕಾರ ಇವತ್ತಿನ ಸಭೆ ಮಾಡುತ್ತಿದ್ದೇನೆ. ಕೋರ್ಟ್‌ನಲ್ಲಿ ತಡೆಯಾಜ್ಞೆ ತೆರವು ಆಗಿದ್ದಕ್ಕೆ ಸಭೆ ಮಾಡುತ್ತಿದ್ದೇನೆ ಎಂದರು.