ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರ ಅಧ್ಯಕ್ಷತೆಯಲ್ಲಿಂದು ಚಾಮುಂಡೇಶ್ವರಿ ಕೇತ್ರದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಇ-ಖಾತೆ ಸಮಸ್ಯೆ, ಗ್ರಾಮ ಪಂಚಾಯಿತಿಗಳಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರು, ಇ-ಖಾತೆಯಿಂದ ಜನರಿಗೆ ಭಾರೀ ತೊಂದರೆಯಾಗುತ್ತಿದೆ. ಈ ಬಗ್ಗೆ ನಮ್ಮ ಕಚೇರಿಗೆ ಸಾಕಷ್ಟು ದೂರುಗಳು ಬರುತ್ತಿವೆ ಎಂದರು.
ಇದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ ಅವರು, ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕೆಲಸ ಕಾರ್ಯಗಳ ಬಗ್ಗೆ ಅಧಿಕಾರಿಗಳನ್ನು ಪ್ರಶ್ನೆ ಮಾಡಿದರು.
ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ 3260 ಮನೆಗಳು ಬರಲಿದ್ದು, ಎಷ್ಟು ಮನೆಗಳಿಗೆ ಖಾತೆ ಆಗಿದೆ ಎಂದು ಪ್ರಶ್ನೆ ಮಾಡಿದರು. ಪಟ್ಟಣ ಪಂಚಾಯಿತಿ ಆಗಿ ಐದು ವರ್ಷ ಕಳೆದರೂ ಇನ್ನೂ ಕೆಲಸಗಳು ಆಗಿಲ್ಲವೇ ಎಂದು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…
ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…