ಬೆಂಗಳೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್ ಇನ್ನು ಮುಂದೆ ನ್ಯಾಯಲಯದ ಅನುಮತಿ ಪಡೆಯದೇ ಯಾವುದೇ ನಿರ್ಧಾರ ಮತ್ತು ಕ್ರಮಗಳನ್ನು ಕೈಗೊಳ್ಳುವಂತಿಲ್ಲ ಎಂದು ಸರ್ಕಾರದ ವಿರುದ್ಧ ಮಹತ್ವದ ಆದೇಶ ನೀಡಿದೆ.
ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸರ್ಕಾರ ಜಾರಿಗೆ ತಂದಿರುವ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಎಂದು ಪ್ರಶ್ನಿಸಿ ಸರ್ಕಾರದ ವಿರುದ್ಧ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್‌ಗೌಡರ್ ಅವರು ನ್ಯಾಯಾಲಯದ ಅನುಮತಿಯಿಲ್ಲದೆ ಸರ್ಕಾರ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ 2024ರ ಸೆಕ್ಷನ್ 16 ಮತ್ತು 17ರ ಅಡಿಯಲ್ಲಿ ಯಾವುದೇ ನಿರ್ಧಾರ ಹಾಗೂ ಕ್ರಮವನ್ನು ತೆಗೆದುಕೊಳ್ಳುವಂತಿಲ್ಲ ಎಂದು ಮಧ್ಯಂತರ ಆದೇಶ ಹೊರಡಿಸಿದ್ದಾರೆ.





