ಮೈಸೂರು: ಇಂದು ನಾಡ ಅಧಿದೇವತೆ ಚಾಮುಂಡೇಶ್ವರಿಯ ವರ್ಧಂತಿ ಮಹೋತ್ಸವದ ಅಂಗವಾಗಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿದರು.
ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಪ್ರಯುಕ್ತ ಚಾಮುಂಡಿಬೆಟ್ಟದಲ್ಲಿ ಸಡಗರ ಮನೆಮಾಡಿದ್ದು, ಚಾಮುಂಡೇಶ್ವರಿ ದರ್ಶನಕ್ಕೆ ಸಹಸ್ರಾರು ಭಕ್ತರು ಆಗಮಿಸುತ್ತಿದ್ದಾರೆ. ವರ್ಧಂತಿ ಮಹೋತ್ಸವದ ಪ್ರಯುಕ್ರ ದೇವಾಲಯದ ಗರ್ಭಗುಡಿಯನ್ನು ವಿವಿಧ ಬಗೆಯ ಹೂವುಗಳಿಂದ ಅಲಂಕಾರ ಮಾಡಲಾಗಿದೆ.
ವರ್ಧಂತಿ ಮಹೋತ್ಸವದ ಪ್ರಯುಕ್ತ ರಾಜಮಾತೆ ಪ್ರಮೋದಾದೇವಿ ಒಡೆಯರ್ ಹಾಗೂ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿದರು. ಈ ವೇಳೆ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಕೂಡ ಉಪಸ್ಥಿತರಿದ್ದರು.
ಬಳಿಕ ಅರ್ಚಕ ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ಪಲ್ಲಕ್ಕಿ ಮೇಲೆ ಚಾಮುಂಡೇಶ್ವರಿ ದೇವಿಯ ಮೂರ್ತಿಯನ್ನು ಕೂರಿಸಿ ದೇವಾಲಯದ ಸುತ್ತ ಮೆರವಣಿಗೆ ಮಾಡಲಾಯಿತು. ದೇಗುಲದ ಆವರಣದಲ್ಲೇ ಸಾವಿರಾರು ಸಾರ್ವಜನಿಕರು ಪಲ್ಲಕ್ಕಿ ಮೆರವಣಿಗೆ ನೋಡಿ, ತಾಯಿ ಚಾಮುಂಡಿಯನ್ನು ಮನದಲ್ಲೇ ನೆನೆದರು.
ಇನ್ನು ಇಂದು ರಾತ್ರಿ 8 ಗಂಟೆ ಬಳಿಕ ದರ್ಬಾರ್ ಉತ್ಸವ ನಡೆಯಲಿದ್ದು, ಅರಮನೆಯ ದರ್ಬಾರ್ ಮಾದರಿಯಲ್ಲೇ ಚಾಮುಂಡೇಶ್ವರಿ ಅಮ್ಮನವರಿಗೆ ದರ್ಬಾರ್ ಉತ್ಸವ ನೆರವೇರಲಿದೆ.
ಶನಿವಾರಸಂತೆ: ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಮಂಗಳವಾರ ಸಂಜೆ ಕಾಫಿ ತೋಟದಲ್ಲಿ ಪತ್ತೆಯಾಗಿದ್ದು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಕೊಡಗು ಜಿಲ್ಲಾ…
ಎಸ್.ಎಸ್.ಭಟ್ ನಂ.ಗೂಡು: ಹೊಸ ಸೇತುವೆಯಲ್ಲಿ ದ್ವಿಮುಖ ಸಂಚಾರಕ್ಕೆ ಪೂರ್ವಸಿದ್ಧತೆ ಕೈಗೊಳ್ಳದಿದ್ದರೆ ಅಪಾಯದ ಭೀತಿ ನಂಜನಗೂಡು: ಕಬಿನಿ ನದಿಯ ದೇವರಾಜ ಅರಸು…
ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲಿ ಅಸಮಾಧಾನ; ಶೀಘ್ರದಲ್ಲಿ ನೇಮಕ ಮಾಡಲು ಆಗ್ರಹ ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ತಾಲ್ಲೂಕು ಅಧ್ಯಕ್ಷ ಸ್ಥಾನ…
ದೇವರಾಜ ಅರಸು ಕಾಲೋನಿ, ಪೌರಕಾರ್ಮಿಕರ ಕಾಲೋನಿಯಲ್ಲಿ ನೀರಿನ ಸಮಸ್ಯೆ ಪ್ರಶಾಂತ್ ಎಸ್. ಮೈಸೂರು: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ ೬೨ರ…
ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶಗಳ ನಡುವಿನ ಯುದ್ಧದ ಪರಿಣಾಮ ಜಿಲ್ಲೆಯಲ್ಲಿ ತಿಂಗಳು ಕಳೆದರೂ ಗ್ಯಾಸ್ ಟ್ರಬಲ್ ತಗ್ಗಿಲ್ಲ.…