ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ರಸ್ತೆಯಲ್ಲಿ ಶುಕ್ರವಾರ (ಸೆಪ್ಟೆಂಬರ್.26) ಸಂಜೆ ಸಂಭವಿಸಿದ್ದ ಸರಣಿ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ವಿದ್ಯುತ್ ದೀಪಾಲಂಕಾರ ಕಂಬಕ್ಕೆ ಡಿಕ್ಕಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ನಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು ಬಸ್‌ನಿಂದ ಕಾಡಿನೊಳಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.
ಇದನ್ನೂ ಓದಿ:-ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ: ಮೋದಿ ಸರ್ಕಾರ ರಾಜ್ಯದ ಪರ ನಿಲ್ಲುತ್ತದೆ ಎಂದ ಎಚ್‌ಡಿಕೆ
ವಿದ್ಯುತ್ ಕಂಬ ಸರಿಪಡಿಸಲು ಬಂದಿದ್ದ ವ್ಯಕ್ತಿಯೋರ್ವ ಸ್ವಲ್ಪ ದೂರದ ಬಳಿ ಒಂದು ಬ್ಯಾಗ್ ಬಿದ್ದಿದ್ದನ್ನು ಗಮನಿಸಿದ್ದಾನೆ. ಈ ವೇಳೆ ಹತ್ತಿರ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಚಿಕ್ಕಬಸವೇಗೌಡ ಎಂಬುವವರೇ ಅಪಘಾತದಲ್ಲಿ ಮೃತಪಟ್ಟಿರುವ ದುರ್ದೈವಿಯಾಗಿದ್ದು, ಈ ಸಂಬಂಧ ಸಿದ್ಧಾರ್ಥ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





