ಮೈಸೂರು ನಗರ

ಚಾಮುಂಡಿಬೆಟ್ಟದಲ್ಲಿ ಸರಣಿ ಅಪಘಾತ ಪ್ರಕರಣ: ಓರ್ವ ವ್ಯಕ್ತಿ ಸಾವು

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ರಸ್ತೆಯಲ್ಲಿ ಶುಕ್ರವಾರ (ಸೆಪ್ಟೆಂಬರ್.‌26) ಸಂಜೆ ಸಂಭವಿಸಿದ್ದ ಸರಣಿ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ವಿದ್ಯುತ್ ದೀಪಾಲಂಕಾರ ಕಂಬಕ್ಕೆ ಡಿಕ್ಕಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ನಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು ಬಸ್‌ನಿಂದ ಕಾಡಿನೊಳಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ:-ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ: ಮೋದಿ ಸರ್ಕಾರ ರಾಜ್ಯದ ಪರ ನಿಲ್ಲುತ್ತದೆ ಎಂದ ಎಚ್‌ಡಿಕೆ

ವಿದ್ಯುತ್‌ ಕಂಬ ಸರಿಪಡಿಸಲು ಬಂದಿದ್ದ ವ್ಯಕ್ತಿಯೋರ್ವ ಸ್ವಲ್ಪ ದೂರದ ಬಳಿ ಒಂದು ಬ್ಯಾಗ್ ಬಿದ್ದಿದ್ದನ್ನು ಗಮನಿಸಿದ್ದಾನೆ. ಈ ವೇಳೆ ಹತ್ತಿರ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಚಿಕ್ಕಬಸವೇಗೌಡ ಎಂಬುವವರೇ ಅಪಘಾತದಲ್ಲಿ ಮೃತಪಟ್ಟಿರುವ ದುರ್ದೈವಿಯಾಗಿದ್ದು, ಈ ಸಂಬಂಧ ಸಿದ್ಧಾರ್ಥ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

4 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

4 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

4 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

4 hours ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

4 hours ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

5 hours ago