ಮೈಸೂರು ನಗರ

ದಾಸೋಹ ಭವನಕ್ಕೆ ಶೂ ಧರಿಸಿ ಬಂದ ಚಾಮುಂಡಿ ಬೆಟ್ಟ ಕಾರ್ಯದರ್ಶಿ ರೂಪ: ಪತ್ರಕರ್ತರ ಪ್ರಶ್ನೆಗೆ ಮೌನ

ಮೈಸೂರು: ಚಾಮುಂಡಿಬೆಟ್ಟ ಕಾರ್ಯದರ್ಶಿ ರೂಪ ಯಡವಟ್ಟೊಂದನ್ನು ಮಾಡಿಕೊಂಡಿದ್ದು, ಚಾಮುಂಡಿ ಬೆಟ್ಟದ ದಾಸೋಹ ಭವನಕ್ಕೆ ಶೂ ಧರಿಸಿ ಬಂದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಆಷಾಢ ಶುಕ್ರವಾರಕ್ಕೆ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಇಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಸೇರಿದಂತೆ ಹಲವು ಅಧಿಕಾರಿಗಳು ಸಿದ್ಧತೆ ಪರಿಶೀಲನೆ ನಡೆಸಿದರು.

ಪರಿಶೀಲನೆ ಬಳಿಕ ದಾಸೋಹ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಚಾಮುಂಡಿ ಬೆಟ್ಟ ಕಾರ್ಯದರ್ಶಿ ರೂಪ ಯಡವಟ್ಟೊಂದನ್ನು ಮಾಡಿಕೊಂಡಿದ್ದು, ದಾಸೋಹ ಭವನಕ್ಕೆ ಶೂ ಧರಿಸಿಯೇ ಬಂದಿದ್ದರು.

ದಾಸೋಹ ಭವನಕ್ಕೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಮತ್ತು ಕಮಿಷನರ್ ಸೀಮಾ ಲಾಟ್ಕರ್ ಮತ್ತು ಅಧಿಕಾರಿಗಳೆಲ್ಲರು ಶೂ ತೆಗೆದು ಬಂದಿದ್ದರು. ಆದ್ರೆ ರೂಪ ಅವರು ಮಾತ್ರ ಶೂ ಹಾಕಿಕೊಂಡು ದಾಸೋಹ ಭವನದ ಒಳಗೆ ಬಂದು ಅಧಿಕಾರಿಗಳ ಪಕ್ಕದಲ್ಲೇ ಕುಳಿತಿದ್ದರು.

ಈ ಮೂಲಕ ದಾಸೋಹ ಭವನದಲ್ಲಿ ಪಾಲಿಸಬೇಕಾದ ನಿಯಮವನ್ನು ರೂಪ ಗಾಳಿಗೆ ತೂರಿದ್ದು, ಪತ್ರಕರ್ತರ ಪ್ರಶ್ನೆಗೆ ಮೌನವಾಗಿ ಕುಳಿತಿದ್ದರು. ಪತ್ರಿಕಾಗೋಷ್ಠಿಗೆ ಸರಿಯಾದ ವ್ಯವಸ್ಥೆ ಮಾಡದ ಕಾರ್ಯದರ್ಶಿ ರೂಪ ಜೊತೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಕೆಲಕಾಲ ಚರ್ಚೆ ಮಾಡಿದರು.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

9 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

10 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

10 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

10 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

11 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

11 hours ago