Mysore
20
overcast clouds
Light
Dark

ಚಾಮುಂಡಿಬೆಟ್ಟದ ದಾಸೋಹ ಭವನದಲ್ಲಿ ರಾತ್ರಿಯೂ ಅನ್ನದಾಸೋಹ ಸೇವೆ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನದ ದಾಸೋಹ ಭವನದಲ್ಲಿ ಇನ್ನು ಮುಂದೆ ರಾತ್ರಿ ವೇಳೆಯೂ ಅನ್ನದಾಸೋಹ ಸೇವೆ ಆರಂಭಿಸಲಾಗಿದೆ.

ಈ ಬಗ್ಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಕ್ರಮ ಕೈಗೊಳ್ಳಲಾಗಿದೆ. ಪವಿತ್ರ ಯಾತ್ರಾ ಸ್ಥಳವಾದ ಚಾಮುಂಡಿಬೆಟ್ಟಕ್ಕೆ ಬರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ.

ಸಂಜೆಯ ವೇಳೆಗೆ ಹಾಗೂ ರಾತ್ರಿಯ ಸಮಯದಲ್ಲೂ ಅಪಾರ ಪ್ರವಾಸಿಗರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಬೆಟ್ಟಕ್ಕೆ ಬಂದ ಭಕ್ತರು ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ರಾತ್ರಿಯ ವೇಳೆ ಅನ್ನಪ್ರಸಾದ ನೀಡುವ ಕೆಲಸವನ್ನು ಆರಂಭಿಸಲಾಗಿದೆ.

ಈಗ ಸಂಜೆ 7.30 ರಿಂದ 9.30ರವರೆಗೆ ದಾಸೋಹ ವ್ಯವಸ್ಥೆ ಮಾಡಲಾಗಿದ್ದು, ಬೆಟ್ಟಕ್ಕೆ ಬರುವ ಪ್ರವಾಸಿಗರಿಗೆ ಭಾರೀ ಸಂತಸವಾಗಿದೆ.

ಈ ವಿಷಯದ ಬಗ್ಗೆ ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಪ್ರಾಧಿಕಾರದ ಮೊದಲ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಬೆಟ್ಟದಲ್ಲಿ ರಾತ್ರಿಯ ವೇಳೆ ಪ್ರಸಾದ ವ್ಯವಸ್ಥೆ ಮಾಡಲಾಗಿದ್ದು, ಬೆಟ್ಟಕ್ಕೆ ಬರುವ ಸಾರ್ವಜನಿಕರಿಗೆ ತುಂಬಾ ಅನುಕೂಲವಾಗಲಿದೆ.