ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನದ ದಾಸೋಹ ಭವನದಲ್ಲಿ ಇನ್ನು ಮುಂದೆ ರಾತ್ರಿ ವೇಳೆಯೂ ಅನ್ನದಾಸೋಹ ಸೇವೆ ಆರಂಭಿಸಲಾಗಿದೆ.
ಈ ಬಗ್ಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಕ್ರಮ ಕೈಗೊಳ್ಳಲಾಗಿದೆ. ಪವಿತ್ರ ಯಾತ್ರಾ ಸ್ಥಳವಾದ ಚಾಮುಂಡಿಬೆಟ್ಟಕ್ಕೆ ಬರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ.
ಸಂಜೆಯ ವೇಳೆಗೆ ಹಾಗೂ ರಾತ್ರಿಯ ಸಮಯದಲ್ಲೂ ಅಪಾರ ಪ್ರವಾಸಿಗರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಬೆಟ್ಟಕ್ಕೆ ಬಂದ ಭಕ್ತರು ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ರಾತ್ರಿಯ ವೇಳೆ ಅನ್ನಪ್ರಸಾದ ನೀಡುವ ಕೆಲಸವನ್ನು ಆರಂಭಿಸಲಾಗಿದೆ.
ಈಗ ಸಂಜೆ 7.30 ರಿಂದ 9.30ರವರೆಗೆ ದಾಸೋಹ ವ್ಯವಸ್ಥೆ ಮಾಡಲಾಗಿದ್ದು, ಬೆಟ್ಟಕ್ಕೆ ಬರುವ ಪ್ರವಾಸಿಗರಿಗೆ ಭಾರೀ ಸಂತಸವಾಗಿದೆ.
ಈ ವಿಷಯದ ಬಗ್ಗೆ ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಪ್ರಾಧಿಕಾರದ ಮೊದಲ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಬೆಟ್ಟದಲ್ಲಿ ರಾತ್ರಿಯ ವೇಳೆ ಪ್ರಸಾದ ವ್ಯವಸ್ಥೆ ಮಾಡಲಾಗಿದ್ದು, ಬೆಟ್ಟಕ್ಕೆ ಬರುವ ಸಾರ್ವಜನಿಕರಿಗೆ ತುಂಬಾ ಅನುಕೂಲವಾಗಲಿದೆ.
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…