ಮೈಸೂರು : ಚಾಮುಂಡಿಬೆಟ್ಟದಲ್ಲಿಇಂದು ಮೊದಲನೇ ಆಷಾಢ ಶುಕ್ರವಾರದ ಸಂಭ್ರಮ ಮನೆಮಾಡಿದ್ದು,ಮುಂಜಾನೆಯೆ ತಾಯಿ ಚಾಮುಂಡೇಶ್ವರಿಗೆ ವಿವಿಧ ಅಭಿಷೇಕದ ಜೊತೆಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಅಲ್ಲದೆ ತಾಯಿಗೆ ಮೊದಲ ಅಷಾಢ ಶುಕ್ರವಾರದ ಪ್ರಯುಕ್ತ ವಿಶೇಷವಾದ ಅಲಂಕಾರ ಮಾಡಲಾಗಿದೆ.
ಸಾವಿರಾರು ಭಕ್ತರು ಮುಂಜಾನೆಯಿಂದಲೇ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ತಾಯಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಇನ್ನು ಬರುವಂತ ಭಕ್ತರಿಗೆ ಕುಡಿಯುವ ನೀರಿನ ವ್ಯವಸ್ಥೆ, ಉಪಹಾರ, ಪ್ರಸಾದ, ವಾಹನಗಳ ನಿಲುಗಡೆ, ಶೌಚಾಲಯ ಸೇರಿದಂತೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನ ಒದಗಿಸಲಾಗಿದೆ.
ಅಲ್ಲದೆ ಸರತಿ ಸಾಲಿನಲ್ಲಿ ದರ್ಶನಕ್ಕೆ ಹೋಗುವ ಭಕ್ತರಿಗೆ ನೆರಳಿನ ವ್ಯವಸ್ಥೆಯ ಜೊತೆಗೆ ಯಾವುದೇ ರೀತಿಯ ನೂಕು ನುಗ್ಗಲು ಉಂಟಾಗದಂತೆ ಬ್ಯಾರಿಕೇಡ್ ವ್ಯವಸ್ಥೆ ಮಾಡಿದ್ದಾರೆ. ಅಲ್ಲದೆ ಎಲ್ಲಾ ಕಡೆ ಸಿಸಿಟಿವಿ ಕ್ಯಾಮಾರಗಳನ್ನ ಅಳವಡಿಸಲಾಗಿದ್ದು, ಬಿಗಿಭದ್ರತೆಗಾಗಿ ಹೆಚ್ಚಿನ ಪೊಲೀಸರನ್ನು ಸಹ ನಿಯೋಜನೆ ಮಾಡಲಾಗಿದೆ.





