ಮೈಸೂರು ನಗರ

ಮುಖ್ಯಮಂತ್ರಿ ಬದಲಾವಣೆ ವಿಚಾರ: ಸಿದ್ದರಾಮಯ್ಯ ಹೇಳಿದ ಮೇಲೆ ಮುಗೀತು ಎಂದ ಸಚಿವ ಎಚ್‌ಸಿಎಂ

ಮೈಸೂರು: ಸಿದ್ದರಾಮಯ್ಯ ಅವರು ಐದು ವರ್ಷ ನಾನೇ ಸಿಎಂ ಎಂದು ಹೇಳಿದ ಮೇಲೆ ಮುಗೀತು. ಮತ್ತೆ ಇನ್ನೇನು ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರದ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಡಿಕೆ.ಶಿವಕುಮಾರ್‌‌ಗೆ ಶಾಸಕರ ಬೆಂಬಲ ಇಲ್ಲ.
ಹಾಗಾಗಿ ನಾನೇ 5 ವರ್ಷ ಸಿಎಂ ಆಗಿರುತ್ತೇನೆ ಎಂದು ಹೇಳಿದ ಮೇಲೆ ಮುಗಿತಲ್ಲ ಬಿಡಿ ಎಂದು ಸಿದ್ದು ಪರ ಬ್ಯಾಟ್‌ ಮಾಡಿದರು. ಇನ್ನು ಸಂಕ್ರಾಂತಿಯಂತೂ ನಡೆದೇ ನಡೆಯುತ್ತದೆ. ಸಿಎಂ, ಸುರ್ಜೇವಾಲ ಸ್ಪಷ್ಟಪಡಿಸಿದ ಮೇಲೆ ಯಾಕೆ ಮತ್ತೆ ಮತ್ತೆ ಪ್ರಶ್ನೆ ಕೇಳ್ತೀರಿ ಎಂದು ಮಾಧ್ಯಮದವರನ್ನೇ ಪ್ರಶ್ನೆ ಮಾಡಿದರು.

ಇನ್ನು ಡಿಕೆಶಿ ಪಕ್ಷ ಕಟ್ಟಿದ್ದಾರೆ, ಅಧಿಕಾರಕ್ಕೆ ತರಲು ಶ್ರಮಿಸಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪಕ್ಷ ಕಟ್ಟಿದ್ರು ಅಂದ್ರೆ, ಎಲ್ಲರು ಸೇರಿದ್ರೆ ಅಲ್ವ ಅಣೆಕಟ್ಟು ಕಟ್ಟೋದು. ಅಣೆಕಟ್ಟನ್ನು ಕಲ್ಲು, ಮಣ್ಣು, ಜೆಲ್ಲಿ ಎಲ್ಲ ಸೇರಿಸಿ ಕಟ್ಟುತ್ತೇವೆ. ಹನಿ ಹನಿ ಗೂಡಿದ್ರೆ ಹಳ್ಳ ಎಂಬಂತೆ ಎಲ್ಲ ಸೇರಿ ಕಟ್ಟಿದ್ದಾರೆ. ಅದರಲ್ಲಿ ಡಿಕೆ.ಶಿವಕುಮಾರ್ ಪ್ರಮುಖ ಪಾತ್ರ ವಹಿಸಿದ್ದಾರೆ. ಅದನ್ನ ನಾವು ಇಲ್ಲ ಅನ್ನೋಕಾಗುತ್ತ? ಎಂದು ಪ್ರಶ್ನಿಸಿದ ಅವರು, ಖರ್ಗೆ, ಪರಮೇಶ್ವರ್, ದಿನೇಶ್‌ ಗುಂಡೂರಾವ್, ಆರ್.ವಿ.ದೇಶಪಾಂಡೆ ಪಾತ್ರ ಇಲ್ವ. ಯಾರ್ ಯಾರಿಗೆ ಪಕ್ಷ ಜವಾಬ್ದಾರಿ ಕೊಟ್ಟಿದೆ ಆಗ ಎಲ್ಲರೂ ಕೆಲಸ ಮಾಡಿದ್ದಾರೆ. ಪ್ರಸ್ತಾಪಗಳು ಬೇಜಾನು ಬರುತ್ತವೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಹೈಕಮಾಂಡ್ ಈಗಾಗಲೇ ತೀರ್ಮಾನ ತೆಗೆದುಕೊಂಡಿದೆ. ಸಿಎಂ 5 ವರ್ಷ ನಾನೇ ಇರುತ್ತೇನೆ ಎಂದು ಹೇಳಿರುವಾಗ ಯಾವುದೇ ಪ್ರಶ್ನೆ ಇಲ್ಲ ಎಂದು ಸಿಎಂ ಬದಲಾವಣೆ ಬಗ್ಗೆ ಸ್ಪಷ್ಟನೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

6 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

6 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

6 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

6 hours ago

ಪರಿಸರ ಸ್ನೇಹಿ ಸಮಾಜ ಮನೆಯಿಂದಲೇ ಆರಂಭವಾಗಲಿ

ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…

6 hours ago

ಮತ್ತೊಮ್ಮೆ ನ್ಯಾಯಾಲಯದತ್ತ ಮಲ್ಟಿಪ್ಲೆಕ್ಸ್ ಸಂಘಟನೆ, ಇತರರು

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…

6 hours ago