Mysore
21
clear sky

Social Media

ಶುಕ್ರವಾರ, 30 ಜನವರಿ 2026
Light
Dark

ಚನ್ನಪಟ್ಟಣದಲ್ಲಿ ನಿಖಿಲ್‌ ಕುಮಾರಸ್ವಾಮಿ ಗೆಲುವು ಪಕ್ಕಾ: ಎಂಎಲ್‌ಸಿ ಎಚ್.ವಿಶ್ವನಾಥ್‌

ಮೈಸೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಗೆಲುವು ಸಾಧಿಸಲಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಅಭ್ಯರ್ಥಿಗಳು ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ. ಈ ಬೆನ್ನಲ್ಲೇ ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಂಎಲ್‌ಸಿ ಎಚ್.ವಿಶ್ವನಾಥ್‌ ಅವರು, ಚನ್ನಪಟ್ಟಣ ಕ್ಷೇತ್ರದಲ್ಲಿ ನಿಖಿಲ್‌ ಕುಮಾರಸ್ವಾಮಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಈ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಧೂಳಿಪಟವಾಗುವುದು ಗ್ಯಾರಂಟಿ. ಏಕೆಂದರೆ ಈಗಾಗಲೇ ಕಾಂಗ್ರೆಸ್‌ ಮೇಲೆ ಮುಡಾ ಮತ್ತು ವಾಲ್ಮೀಕಿ ಹಗರಣಗಳ ಕಾರ್ಮೋಡ ಕವಿದಿದೆ. ಹೀಗಾಗಿ ಚನ್ನಪಟ್ಟಣದಲ್ಲಿ ಜೆಡಿಎಸ್‌ಗೆ ಗೆಲುವಿನ ವಾತಾವರಣವಿದೆ. ಅಲ್ಲದೇ, ಕಾಂಗ್ರೆಸ್‌ ಅಭ್ಯರ್ಥಿ ಯೋಗೇಶ್ವರ್‌ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿದ್ದು, ಮೆಗಾಸಿಟಿ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದಾರೆ. ಈ ವಂಚನೆಗೊಳಗಾಗಿದವರಲ್ಲಿ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ಕಾರಣಕ್ಕೆ ಚನ್ನಪಟ್ಟಣದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Tags:
error: Content is protected !!